ಕರ್ನಾಟಕ

karnataka

ETV Bharat / state

ಉಪಚುನಾವಣೆಯಲ್ಲಿ ಹೊಂದಾಣಿಕೆ ಇಲ್ಲವೆಂದ ಹೆಚ್​ಡಿಡಿ: ಪುರಸಭೆ ಎಲೆಕ್ಷನ್​ ಪ್ರಚಾರ ಜೋರು - ದೇವೇಗೌಡ ಲೇಟೆಸ್ಟ್​ ನ್ಯೂಸ್

ಮಾಗಡಿ ಪುರಸಭೆ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್​ ಅಭ್ಯರ್ಥಿಗಳ ಪರ ಜೆಡಿಎಸ್ ವರಿಷ್ಠ ಹೆಚ್​.ಡಿ. ದೇವೇಗೌಡ ಅವರು ಪ್ರಚಾರ ಕೈಗೊಂಡಿದ್ದಾರೆ.

ಉಪಚುನಾವಣೆಯಲ್ಲಿ ಹೊಂದಾಣಿಕೆ ಇಲ್ಲ ಎಂದ ಹೆಚ್​ಡಿಕೆ

By

Published : Nov 7, 2019, 10:21 PM IST

ರಾಮನಗರ:ಬೈ ಎಲೆಕ್ಷನ್​ನಲ್ಲಿ ನಾವು ಸ್ಪರ್ಧಿಸುತ್ತೇವೆ, ಯಾರ ಜೊತೆಯೂ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಜೆಡಿಎಸ್ ವರಿಷ್ಠ ಹೆಚ್​ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ.

ಉಪಚುನಾವಣೆಯಲ್ಲಿ ಹೊಂದಾಣಿಕೆ ಇಲ್ಲವೆಂದ ಹೆಚ್​ಡಿಕೆ

ಪಕ್ಷದಿಂದ ಹೊರಗೆ ಹಾಕಿದ್ದವರಿಗೆ ಪಕ್ಷ ಕಟ್ಟಲು ನಾನೇ ಬೇಕಾಯ್ತು. ಒಂದು ಜಾತಿಗೆ ಸೀಮಿತವಾದ ರಾಜಕಾರಣವನ್ನ ನಾನು ಎಂದೂ ಮಾಡಿಲ್ಲ. ಇಲ್ಲೋರ್ವ ಅಹಿಂದಾ ಅಹಿಂದ ಅಂತಾನೆ. ಇಬ್ಬರ ವಿರುದ್ಧವೂ ನಾನು ಹೋರಾಟ ಮಾಡಿದ್ದೇನೆ ಎಂದು ಪರೋಕ್ಷವಾಗಿ ಮಾಜಿ ಸಿಎಂ ಸಿದ್ದರಾಮಯ್ಯಗೆ ಟಾಂಗ್ ನೀಡಿದ್ದಾರೆ.

ಮಾಗಡಿ ಲೋಕಲ್ ಪಾಲಿಟಿಕ್ಸ್ ಗರಿಗೆದರಿದ್ದು, ಪುರಸಭೆ ಚುನಾವಣೆಯ ರಣಕಣ ರಂಗೇರಿದೆ. ತಮ್ಮ ಅಭ್ಯರ್ಥಿಗಳ ಪರ ಮತಯಾಚಿಸಿದ ದೇವೇಗೌಡರು, ಕನಕಪುರದಲ್ಲಿ ನಮ್ಮ ಶಕ್ತಿ ಕಡಿಮೆ ಇದೆ. ಡಿಕೆಶಿ ಅಲ್ಲಿ ಪ್ರಬಲರಾಗಿರುವ ಹಿನ್ನೆಲೆ ನಾವು 4 ಕಡೆ ಸ್ಪರ್ಧೆ ಮಾಡಿದ್ದೇವೆ ಅಷ್ಟೇ. ಅದನ್ನ ಹೊರತುಪಡಿಸಿ ಯಾವುದೇ ಹೊಂದಾಣಿಕೆ ಇಲ್ಲ ಎಂದು ತಿಳಿಸಿದರು.

ಸ್ಥಳೀಯ ಕಾರ್ಯಕರ್ತರು ಬಿಜೆಪಿಗೆ ಅವಕಾಶ ಕೊಡಬಾರದು ಅಂತ ನಿರ್ಧರಿಸಿದ್ದಾರೆ. ಹೆಚ್​ಡಿಕೆಗೆ ಡಿಕೆಶಿ ಬಲ ಕೊಟ್ಟು ಸಿಎಂ ಆಗುವಂತೆ ಬೆಂಬಲಿಸಿದ್ದರು. ರಾಜ್ಯದ ಬೇರೆ ಬೇರೆ ಜಿಲ್ಲೆಯ ಎಲ್ಲ ಕಡೆ ನಾವು ಸ್ಪರ್ಧೆ ಮಾಡಿದ್ದೇವೆ. ಇದರಲ್ಲಿ ಬೇರೇನೊ ಅರ್ಥ ಕಲ್ಪಿಸುವ ಅಗತ್ಯತೆ ಇಲ್ಲ. ನಮ್ಮ ಶಕ್ತಿ ಎಷ್ಟಿದೆಯೋ ಅಷ್ಟಕ್ಕೆ ಸ್ಪರ್ಧೆ ಮಾಡಿದ್ದೇವೆ ಎಂದರು. ಇನ್ನು ಇಬ್ಬರ ಜೊತೆ ಮೈತ್ರಿ ಮಾಡಿ ನೋಡಿ ಆಯ್ತು. ಏನೋ ಒಂದು ಘಟನೆ ನಡೆದಿದೆ, ಆ ವಿಷಯವನ್ನ ಈಗ ಎತ್ತಬೇಡಿ ಎಂದು ಮಾಧ್ಯಮದವರ ವಿರುದ್ಧ ಹೆಚ್​ಡಿಡಿ ಗರಂ ಆದ್ರು.

ABOUT THE AUTHOR

...view details