ಕರ್ನಾಟಕ

karnataka

ETV Bharat / state

ಸಿ ಟಿ ರವಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಹೆಚ್​ಡಿ ಕುಮಾರಸ್ವಾಮಿ - ಸಿಟಿ ರವಿ ವಿರುದ್ಧ ಕುಮಾರಸ್ವಾಮಿ ಆಕ್ರೋಶ

ಸಿಟಿ ರವಿ ಅವರು ಕನ್ನಡಿಗ ಎನ್ನುವುದನ್ನು ಮರೆತು ಭಾರತೀಯ ಆಗಿಬಿಟ್ಟಿದ್ದಾರೆ. ಕನ್ನಡ ತಾಯಿಯನ್ನು ಉಳಿಸಿಕೊಂಡಾಗ ಮಾತ್ರ ಭಾರತ ತಾಯಿಯನ್ನು ಉಳಿಸಿಕೊಳ್ಳಬಹುದು..

HD Kumaraswamy
ಹೆಚ್​ಡಿ ಕುಮಾರಸ್ವಾಮಿ

By

Published : Aug 13, 2021, 3:28 PM IST

Updated : Aug 13, 2021, 4:12 PM IST

ರಾಮನಗರ :ಮೇಕೆದಾಟು ಅಣೆಕಟ್ಟು ನಿರ್ಮಾಣ ವಿಚಾರದಲ್ಲಿ ತಾನು ಭಾರತದ ಪರ ಎಂದು ಹೇಳಿಕೆ ನೀಡಿದ್ದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ವಿರುದ್ಧ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆಕ್ರೋಶ ಹೊರ ಹಾಕಿದ್ದಾರೆ.

ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ

ನಗರದ ದೇವೇಗೌಡ ಕಾಂಪ್ಲೆಕ್ಸ್​ನಲ್ಲಿ ನೂತನ ಅಂಗಡಿ ಮಳಿಗೆ ಉದ್ಘಾಟಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷದ ರಾಷ್ಟ್ರ ಘಟಕದ ಪ್ರಧಾನ ಕಾರ್ಯದರ್ಶಿಯಾದ ಸಿಟಿ ರವಿ ಅವರು ಕನ್ನಡಿಗ ಎನ್ನುವುದನ್ನು ಮರೆತು ಭಾರತೀಯ ಆಗಿಬಿಟ್ಟಿದ್ದಾರೆ. ಕನ್ನಡ ತಾಯಿಯನ್ನು ಉಳಿಸಿಕೊಂಡಾಗ ಮಾತ್ರ ಭಾರತ ತಾಯಿಯನ್ನು ಉಳಿಸಿಕೊಳ್ಳಬಹುದು ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರು ಲೇವಡಿ ಮಾಡಿದರು.

ಇನ್ನು, ಮೇಕೆದಾಟು ವಿಚಾರವಾಗಿ ಈ ವಾರದಲ್ಲಿ ಸಿಎಂ ಅವರನ್ನು ನಮ್ಮ ಪಕ್ಷದ ನಿಯೋಗದಿಂದ ಭೇಟಿ ಮಾಡಿ ಸುದೀರ್ಘ ಚರ್ಚೆ ಮಾಡಲಾಗುವುದು. ಮೇಕೆದಾಟು ವಿಚಾರವಾಗಿ ರಾಜ್ಯಪಾಲರಿಗೆ ಮನವಿ ನೀಡಿದ್ದೇವೆ. ರಾಷ್ಟ್ರಪತಿಗಳು ತಕ್ಷಣ ಈ ಕುರಿತಂತೆ ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿ ಕೊಡಬೇಕು ಎಂದರು.

ಓದಿ: ಮಂಗಳೂರಿನಲ್ಲಿ ಎನ್ಐಎ ಕಚೇರಿ ಆರಂಭ?: ಸುಳಿವು ನೀಡಿದ ಸಿಎಂ ಬೊಮ್ಮಾಯಿ

ಈ ವಿಚಾರವಾಗಿ ಮುಖ್ಯಮಂತ್ರಿಗಳ ಸಮಯ ಕೇಳಿದ್ದೇನೆ. ಸುದೀರ್ಘವಾಗಿ ಚರ್ಚೆ ಮಾಡುತ್ತೇನೆ. ಸರ್ಕಾರ ಹಾಗೂ ನೀರಾವರಿ ಮಂತ್ರಿಗಳು ಯೋಜನೆ ಪ್ರಾರಂಭ ಮಾಡಲು ಯಾರ ಅಪ್ಪಣೆ ಬೇಕಿಲ್ಲ ಎಂದೇಳಿದ್ದಾರೆ. ಸಮಯ ವ್ಯರ್ಥ ಮಾಡದೆ ಕೂಡಲೇ ಕಾರ್ಯ ರೂಪಕ್ಕೆ ತರಬೇಕೆಂದು ಆಗ್ರಹಿಸಿದರು.

Last Updated : Aug 13, 2021, 4:12 PM IST

ABOUT THE AUTHOR

...view details