ರಾಮನಗರ/ಬೆಂಗಳೂರು:ವೈದ್ಯರ ಸಲಹೆ ಮೇರೆಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಒಂದು ವಾರ ಕಾಲ ವಿಶ್ರಾಂತಿ ಪಡೆಯಲಿದ್ದಾರೆ. ಕನಿಷ್ಠ ಒಂದು ವಾರವಾದರೂ ಯಾರನ್ನೂ ಭೇಟಿ ಮಾಡುವುದು ಅಥವಾ ಹೆಚ್ಚು ಮಾತನಾಡುವುದು ಮಾಡಬಾರದು ಎಂದು ವೈದ್ಯರು ಸಲಹೆ ನೀಡಿದ್ದಾರೆ ಎಂದು ಹೆಚ್ಡಿಕೆ ತಿಳಿಸಿದ್ದಾರೆ.
ಈ ಬಗ್ಗೆ ಇಂದು ಹೇಳಿಕೆ ಬಿಡುಗಡೆ ಮಾಡಿರುವ ಕುಮಾರಸ್ವಾಮಿ, ಒಂದು ವಾರ ವಿಶ್ರಾಂತಿ ಪಡೆಯುತ್ತಿದ್ದೇನೆ. ಈ ಸಂದರ್ಭದಲ್ಲಿ ನಾನು ಸಾರ್ವಜನಿಕರ ಭೇಟಿಗೆ ಲಭ್ಯ ಇರುವುದಿಲ್ಲ. ಹೀಗಾಗಿ ಬಿಡದಿ ತೋಟಕ್ಕೆ ಅಥವಾ ಪಕ್ಷದ ಕಚೇರಿಗೆ ನನ್ನ ಭೇಟಿಗೆ ಯಾರೂ ಬರಬೇಡಿ ಎಂದು ಮನವಿ ಮಾಡಿದ್ದಾರೆ.