ಕರ್ನಾಟಕ

karnataka

ETV Bharat / state

ಕೇಸರಿ ಶಾಲು ಹಂಚಿಕೆ ಹೇಳಿಕೆ: ಸಾಕ್ಷಿ ಸಮೇತ ಡಿಕೆಶಿ ಜನತೆ ಮುಂದೆ ಇಡಲಿ ಎಂದ ಹೆಚ್​ಡಿಕೆ - KPCC president DK shivakumar saffron shawl distribution statement

ಡಿಕೆಶಿ ಬಳಿ ಮಾಹಿತಿ ಇದ್ದು ಹೇಳಿದ್ದಾರೋ, ಮಾಹಿತಿ ಇಲ್ಲದೇ ಹೇಳಿದ್ದಾರೋ ನನಗೆ ಗೊತ್ತಿಲ್ಲ. ಮಾಹಿತಿ ಇದ್ದರೆ ಸಾಕ್ಷಿ ಸಮೇತ ಜನತೆ ಮುಂದೆ ಇಟ್ಟರೆ ಒಪ್ಪುತ್ತಾರೆ. ಇಲ್ಲಾಂದ್ರೆ ಗಾಳಿಯಲ್ಲಿ ನಾನು ಒಂದು ಗುಂಡು ಹಾರಿಸುತ್ತೇನೆ ಎಂಬಂತೆ ಆಗುತ್ತೆ ಎಂದು ಡಿ.ಕೆ.ಶಿವಕುಮಾರ್​ರ ಕೇಸರಿ ಶಾಲು ಹಂಚಿಕೆ ಹೇಳಿಕೆಗೆ ಹೆಚ್​ಡಿಕೆ ಪ್ರತಿಕ್ರಿಯೆ ನೀಡಿದರು.

hdk
ಚನ್ನಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಹೆಚ್​ಡಿಕೆ

By

Published : Feb 10, 2022, 2:48 PM IST

ರಾಮನಗರ:ಬಿಜೆಪಿಯ ಸಚಿವರ ಮಗ ಓರ್ವ ಕೇಸರಿ ಶಾಲು ಹಂಚುತ್ತಿದ್ದಾರೆ ಎಂದು ಹೇಳಿಕೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ದಾರೆ.

ಚನ್ನಪಟ್ಟಣದಲ್ಲಿ ಮಾತನಾಡಿದ ಹೆಚ್​ಡಿಕೆ, ಅವರ ಬಳಿ ಮಾಹಿತಿ ಇದ್ದು ಹೇಳಿದ್ದಾರೋ, ಮಾಹಿತಿ ಇಲ್ಲದೇ ಹೇಳಿದ್ದಾರೋ ನನಗೆ ಗೊತ್ತಿಲ್ಲ. ಮಾಹಿತಿ ಇದ್ದರೆ ಸಾಕ್ಷಿ ಸಮೇತ ಜನತೆ ಮುಂದೆ ಇಟ್ಟರೆ ಒಪ್ಪುತ್ತಾರೆ. ಇಲ್ಲ ಎಂದರೆ ಗಾಳಿಯಲ್ಲಿ ನಾನು ಒಂದು ಗುಂಡು ಹಾರಿಸುತ್ತೇನೆ ಎಂಬಂತೆ ಆಗುತ್ತೆ ಎಂದು ವ್ಯಂಗ್ಯವಾಡಿದರು.

ಚನ್ನಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಹೆಚ್​ಡಿಕೆ

ಹಿಜಾಬ್ ವಿವಾದದ ಬಗ್ಗೆ ಹಲವಾರು ದೇಶಗಳಲ್ಲಿ ಚರ್ಚೆ ಮಾಡುವ ಹಂತಕ್ಕೆ ತೆಗೆದುಕೊಂಡು ಹೋಗಿದ್ದಾರೆ. ಕಾಂಗ್ರೆಸ್ - ಬಿಜೆಪಿ ಪಕ್ಷಗಳ ಜೊತೆಗೆ ಹಲವು ಸಂಘಟನೆಗಳಿಗೆ ನಾನು ಪ್ರಶ್ನೆ ಕೇಳ್ತೇನೆ. ಅಮಾಯಕ ಮಕ್ಕಳ ಬದುಕಿನ ಜೊತೆಗೆ ಚೆಲ್ಲಾಟ ಆಡ್ತಿದ್ದೀರಿ. ಈ ಸಂಘರ್ಷ ಯಾವ ಶಾಲೆಗಳಲ್ಲಿ ನಡೆಯುತ್ತಿದೆ. ಇದು ದೊಡ್ಡದೊಡ್ಡ ಖಾಸಗಿ ಶಾಲೆಗಳಲ್ಲಿ ನಡೆಯುತ್ತಿದೆಯಾ? ಬಿಜೆಪಿ ನಾಯಕರು, ಕಾಂಗ್ರೆಸ್‌ ನಾಯಕರು ಸಂಘಟನೆಗಳ ನಾಯಕರ ಮಕ್ಕಳು ಯಾರೂ ಸರ್ಕಾರಿ ಶಾಲೆಯಲ್ಲಿ ಅವರ ಮಕ್ಕಳನ್ನ ಓದಿಸುತ್ತಿಲ್ಲ. ಅವರೆಲ್ಲರೂ ಸಹ ಖಾಸಗಿ ಶಾಲೆಗಳಲ್ಲಿ ಓದಿಸುತ್ತಿದ್ದಾರೆ. ಬಿಜೆಪಿ ನಾಯಕರು ಅವರು ಜನ್ಮಕೊಟ್ಟ ಮಕ್ಕಳಿಗೆ ಕೇಸರಿ ಶಾಲು ಹಾಕಿಸಿ ಹೋರಾಟ ಮಾಡಿಸುತ್ತಿದ್ದಾರೆ ಎಂದರು.

ಅವರ ಮಕ್ಕಳಿಗೆ ಕೇಸರಿ ಶಾಲು ಹಾಕಿಸಿ ಹೋರಾಟ ಮಾಡ್ತಿಲ್ಲ. ಅಮಾಯಕ, ಬಡ ಮಕ್ಕಳ ಮಕ್ಕಳಿಗೆ ಕೇಸರಿ ಶಾಲು ಹಾಕಿಸಿ ಹೋರಾಟ ಮಾಡಿಸುತ್ತಿದ್ದಾರೆ. ಇನ್ನೊಂದು ಗುಂಪು ಹಿಜಾಬ್ ಹೆಸರಿನಲ್ಲಿ ಹೋರಾಟ ಮಾಡಿದಲು ಅವರು ಹೊರಟ್ಟಿದ್ದಾರೆ. ಇಲ್ಲಿ ಅಮಾಯಕ ಮಕ್ಕಳನ್ನು ಖಾಸಗಿ ಶಾಲೆಯಲ್ಲಿ ಓದಿಸಲಾಗದೇ ಸರ್ಕಾರಿ ಶಾಲೆಯಲ್ಲಿ ಓದಿಸುತ್ತಿದ್ದಾರೆ.

ಇದು ನಡಿತಿರೋದು ಸರ್ಕಾರಿ ಶಾಲೆಯಲ್ಲಿ. ಕಂಡವರ ಮಕ್ಕಳನ್ನ ಬಾವಿಗೆ ತಳ್ಳೋದನ್ನ ಮಾಡ್ತಿದ್ದಾರೆ. ಇದನ್ನ ಮಕ್ಕಳ ಪೋಷಕರು ಸಹ ಅರ್ಥ ಮಾಡಿಕೊಳ್ಳಬೇಕು. ಈಗಾಗಲೆ ಪ್ರತಿಭಟನೆ ಮಾಡ್ತಿರುವ ಮಕ್ಕಳ ವಿಡಿಯೋ ಚಿತ್ರೀಕರಣ ಮಾಡಿದ್ದಾರೆ. ತೆವಲಿಗೆ ರಾಜಕೀಯ ಪಕ್ಷಗಳು, ಸಂಘಟನೆಗಳು ಮಕ್ಕಳನ್ನ ಬಳಕೆ ಮಾಡಿಕೊಳ್ತಿದ್ದಾರೆ. ಮುಂದೆ ಮಕ್ಕಳ ವಿಡಿಯೋ ಇಟ್ಟುಕೊಂಡು ಕೋರ್ಟ್ ಕಚೇರಿಗೆ ಹೋಗುವಂತೆ ಮಾಡ್ತಾರೆ ಎಂದು ಹೆಚ್​ಡಿಕೆ ಕಿಡಿಕಾರಿದರು.

ಇದನ್ನೂ ಓದಿ: ಡಿ.ಕೆ.ಶಿವಕುಮಾರ್ ಹತಾಶೆಗೊಳಗಾಗಿ ಏನೇನೊ ಮಾತಾನಾಡುತ್ತಿದ್ದಾರೆ: ರೇಣುಕಾಚಾರ್ಯ ಟೀಕಾಪ್ರಹಾರ

ಇದಲ್ಲದೇ ಈಗಾಗಲೇ ಕೆಲವರ ಮೇಲೆ ಎಫ್​ಐಆರ್​ ಆಗಿದೆ, ಇದು ನಿರಂತರವಾಗಿ ನಡೆಯುತ್ತದೆ. ಎರಡೊತ್ತಿನ ಊಟಕ್ಕೂ ಗತಿ ಇರಲ್ಲ ಆ ಮಕ್ಕಳಿಗೆ. ಸಾವಿರಾರು ಜನರ ಮಕ್ಕಳ ಮೇಲೆ ಕೇಸ್ ಬೀಳಲಿದೆ. ಇದನ್ನ ಮೊದಲು ರಾಜಕೀಯ ಪಕ್ಷಗಳು ನಿಲ್ಲಿಸಬೇಕು. ಇವತ್ತು ವಿಚಾರಣೆ ಮಧ್ಯಾಹ್ನ ನಡೆಯಲಿದೆ. ನಾವು ನ್ಯಾಯಾಯಲಗಳ ಮೇಲೆ ಒತ್ತಡ ಹೇರಲು ಸಾಧ್ಯವಿಲ್ಲ. ನ್ಯಾಯಾಂಗ ಇದರಲ್ಲಿ ಮಧ್ಯಸ್ಥಿಕೆ ವಹಿಸಿ ಈ ಪ್ರಕರಣವನ್ನ ತಿಳಿಗೊಳಿಸಬೇಕಿದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಇನ್ನು ಪ್ರಿಯಾಂಕಾ ಗಾಂಧಿ ಟ್ವೀಟ್​ಗೆ ರೇಣುಕಾಚಾರ್ಯ ವಿವಾದಾತ್ಮಕ ಹೇಳಿಕೆ ವಿಚಾರಕ್ಕೆ ಮಾತನಾಡಿದ ಅವರು, ಅದು ಅವರವರ ಭಾವನೆಗೆ ಹೇಳಿದ್ದಾರೆ. ಅದಕ್ಕೆ ನಾನು ಪ್ರತಿಕ್ರಿಯೆ ನೀಡೋದಿಲ್ಲ. ಜನಪ್ರತಿನಿಧಿಯಾಗಿ ಮಾತನಾಡಿದ್ದು ತಪ್ಪು. ಆದರೆ, ಅವರು ಈಗ ಕ್ಷಮೆ ಕೋರಿಕೊಂಡಿದ್ದಾರೆ. ಈ ಪ್ರಕರಣದಲ್ಲಿ ಸರ್ಕಾರದ ವೈಫಲ್ಯ ಕಾಣ್ತಿದೆ. ಗೃಹ ಸಚಿವರ ಮತ್ತು ಸರ್ಕಾರದ ವೈಫಲ್ಯ ಈ ಪ್ರಕರಣದಲ್ಲಿ ಕಾಣ್ತಿದೆ. ಇದರಿಂದ ಅಮಾಯಕ ಮಕ್ಕಳ ಜೊತೆ ಚೆಲ್ಲಾಟ ಆಡ್ತಿದ್ದೇವೆ ಅಷ್ಟೇ ಎಂದರು.

ಮಂಡ್ಯದಲ್ಲಿ ಘೋಷಣೆ ಕೂಗಿದ್ದ ಯುವತಿಗೆ ಕೆಲ ಸಂಘಟನೆ 5 ಲಕ್ಷ ರೂ. ಬಹುಮಾನ ಘೋಷಣೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಈ ದೇಶವನ್ನ ಎಲ್ಲಿಗೆ ತೆಗೆದುಕೊಂಡು ಹೋಗ್ತಿದ್ದಾರೆ. ಇಂತಹ ವಿಚಾರಕ್ಕೆ ಪ್ರಚೋದನೆ ಮಾಡದಂತೆ ಮೇಲೆ ಪೋಷಕರು, ಶಾಲಾ ಮಕ್ಕಳು, ರಾಜ್ಯದ ಜನತೆಗೆ ಮನವಿ ಮಾಡ್ತೇನೆ. ಕುವೆಂಪು ಅವರು 'ಸರ್ವಜನಾಂಗದ ಶಾಂತಿಯ ತೋಟ' ಅಂತಾ ಹೇಳಿದಾರೆ. ಈ ನಾಡು ಶಾಂತಿಯ ಬೀಡು, ಹಾಗಾಗಿ ಇಂತಹದಕ್ಕೆ ಪ್ರೋತ್ಸಾಹ ಕೊಡಬೇಡಿ ಎಂದು ಮನವಿ ಹೆಚ್​ಡಿಕೆ ಮಾಡಿದರು.

ಇದನ್ನೂ ಓದಿ: ಶಿವಮೊಗ್ಗದಲ್ಲಿ ಮಂತ್ರಿ ಮಗನಿಂದಲೇ ಕೇಸರಿ ಶಾಲು, ಪೇಟ ಹಂಚಿಕೆ : ಡಿಕೆಶಿ ಆರೋಪ

For All Latest Updates

TAGGED:

ABOUT THE AUTHOR

...view details