ರಾಮನಗರ: 6 ತಿಂಗಳು ತಾವು ರಾಜ್ಯದ ಮುಖ್ಯಮಂತ್ರಿ ಆಗಬೇಕೆಂದು ಬಯಸುತ್ತಿರುವುದಾಗಿ ವಾಟಾಳ್ ನಾಗರಾಜ್ ಹೇಳಿದ್ದಾರೆ.
ಬಸವ ಜಯಂತಿ ಹಿನ್ನೆಲೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ವಾಟಾಳ್, ಈಗ ರಾಜ್ಯದಲ್ಲಿ ಭ್ರಷ್ಟಾಚಾರ ಎಲ್ಲೆ ಮೀರಿದೆ. ಹಾಗಾಗಿ ನನಗೆ 6 ತಿಂಗಳ ಅಧಿಕಾರ ಕೊಡಿ, ನಾನು ಕೆಲಸ ಮಾಡಿಲ್ಲ ಅಂದರೆ ರಾಜೀನಾಮೆ ಕೊಡುತ್ತೇನೆ ಎಂದರು.