ಕರ್ನಾಟಕ

karnataka

ETV Bharat / state

ರಾಮನಗರ; ಕೋವಿಡ್ ಪರಿಸ್ಥಿತಿ ಅವಲೋಕಿಸಿದ ಉಸ್ತುವಾರಿ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ - ಅಶ್ವತ್ಥ ನಾರಾಯಣ ಸುದ್ದಿ

ಬೊಮ್ಮಾಯಿ ಅವರ ಸಂಪುಟಕ್ಕೆ ಸೇರ್ಪಡೆಯಾದ ಮರುದಿನವೇ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ರಾಮನಗರ ಜಿಲ್ಲೆಯ ಕೋವಿಡ್ ಪರಿಸ್ಥಿತಿಯನ್ನು ಅವಲೋಕನ ಮಾಡಿದರು. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ 0.22ರಷ್ಟಿದೆ. ಆದರೂ ಕೊರೊನಾ ಪರೀಕ್ಷೆ, ಲಸಿಕೆ ಹಾಗೂ ಆರೋಗ್ಯ ಮೂಲಸೌಕರ್ಯಗಳ ಬಗ್ಗೆ ನಿತ್ಯವೂ ಗಮನವಿಟ್ಟು ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

in charge minister ashwath narayana hold covid meeting in ramnagar
ಡಾ.ಸಿ.ಎನ್.ಅಶ್ವತ್ಥ ನಾರಾಯಣ

By

Published : Aug 5, 2021, 8:48 PM IST

ರಾಮನಗರ:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟಕ್ಕೆ ಸೇರ್ಪಡೆಯಾದ ಮರು ದಿನವೇ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ರಾಮನಗರ ಜಿಲ್ಲೆಯ ಕೋವಿಡ್ ಪರಿಸ್ಥಿತಿ ಅವಲೋಕನ ಮಾಡಿದರು.

ಮೂರನೇ ಅಲೆಯನ್ನು ಪರಿಣಾಮಕಾರಿಯಾಗಿ ತಡೆಯುವುದು ಸೇರಿ ಇಡೀ ಜಿಲ್ಲೆಯಲ್ಲಿ ಕೈಗೊಂಡಿರುವ ಲಸಿಕಾಕರಣ, ಆರೋಗ್ಯ ಮೂಲಸೌಕರ್ಯಗಳ ಅಭಿವೃದ್ಧಿ ಇನ್ನಿತರ ಕ್ರಮಗಳ ಬಗ್ಗೆ ವ್ಯಾಪಕ ಪರಿಶೀಲನೆ ನಡೆಸಿದರಲ್ಲದೇ, ಬಾಕಿ ಯಾವುದಾದರೂ ಕೆಲಸ ಇದ್ದರೆ ಅದನ್ನು ವೇಗವಾಗಿ ಮುಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ 0.22ರಷ್ಟಿದೆ. ಹೀಗಾಗಿ ಆತಂಕಪಡುವ ಅಗತ್ಯವಿಲ್ಲ. ಹಾಗಂತ ಎಚ್ಚರ ತಪ್ಪುವುದು ಬೇಡ. ಪರೀಕ್ಷೆ, ಲಸಿಕೆ ಹಾಗೂ ಆರೋಗ್ಯ ಮೂಲಸೌಕರ್ಯಗಳ ಬಗ್ಗೆ ನಿತ್ಯವೂ ಗಮನವಿಟ್ಟು ಕೆಲಸ ಮಾಡಬೇಕು ಎಂದರು.

ಆಗಸ್ಟ್ 15 ರೊಳಗೆ ಬಳಕೆಗೆ ಮುಕ್ತ:

ರಾಮನಗರ ಜಿಲ್ಲಾಸ್ಪತ್ರೆ ಹಾಗೂ ಚನ್ನಪಟ್ಟಣ, ಮಾಗಡಿ ತಾಲೂಕು ಆಸ್ಪತ್ರೆಗಳಲ್ಲಿ ಆಮ್ಲಜನಕ ಉತ್ಪಾದಕ ಘಟಕಗಳನ್ನು ಸ್ಥಾಪಿಸುವ ಕಾಮಗಾರಿ ಭರದಿಂದ ಸಾಗುತ್ತಿದೆ. ಈ ಘಟಕಗಳಲ್ಲಿ ಉತ್ಪಾದನೆ ಆಗುವ ಆಮ್ಲಜನಕವನ್ನು ಇದೇ 15ರ ಹೊತ್ತಿಗೆ ಬಳಕೆ ಮಾಡಿಕೊಳ್ಳಲಾಗುವುದು. ಆ ದಿನದೊಳಗೆ ಬಾಕಿ ಇರುವ ಎಲ್ಲ ಕೆಲಸಗಳನ್ನು ಮುಗಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಹೇಳಿದರು.

ಗುರಿಗಿಂತ ಹೆಚ್ಚು ಪರೀಕ್ಷೆ:

ಪ್ರತಿ ದಿನವೂ ಜಿಲ್ಲೆಯಲ್ಲಿ 1,800 ಆರ್​ಟಿಪಿಸಿಆರ್ - ರ್ಯಾಪಿಡ್​ ಆಂಟಿಜೆನ್ ಪರೀಕ್ಷೆ (ರಾಟ್)ಗಳನ್ನು ಮಾಡುವ ಗುರಿ ಹಾಕಿಕೊಳ್ಳಲಾಗಿದೆ. ಆದರೆ, ಆ ಗುರಿಯನ್ನು ಮೀರಿ 2,400 ಪರೀಕ್ಷೆಗಳನ್ನು ಮಾಡುತ್ತಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದು ಶ್ಲಾಘನೀಯವಾದ ಕೆಲಸ ಎಂದು ಡಾ.ಅಶ್ವತ್ಥ ನಾರಾಯಣ ಹೇಳಿದರು.

ಲಸಿಕಾಕರಣವೂ ಬಿರುಸು:

ಜಿಲ್ಲೆಯಲ್ಲಿ ಕೋವಿಡ ಲಸಿಕೆ ನೀಡುವುದನ್ನು ಚುರುಕುಗೊಳಿಸಲಾಗಿದೆ. ಈಗಾಗಲೇ 18 ವರ್ಷ ಮೇಲ್ಪಟ್ಟ ಶೇ.54 ರಷ್ಟು ಜನಕ್ಕೆ ಲಸಿಕೆ ನೀಡಲಾಗಿದೆ. ಇದರಲ್ಲಿ ಸೆಕೆಂಡ್ ಡೋಸ್ ಪಡೆದವರು ಶೇ.34ರಷ್ಟು ಇದ್ದಾರೆಂದು ಸಚಿವರು ಮಾಹಿತಿ ನೀಡಿದರು.

ABOUT THE AUTHOR

...view details