ಕರ್ನಾಟಕ

karnataka

By

Published : Mar 13, 2021, 10:54 PM IST

ETV Bharat / state

ಪ್ರವಾಸಿ ವರ್ತುಲದಲ್ಲಿ ಜಾನಪದ ಲೋಕ ಸೇರಿಸಲಾಗುವುದು: ಸಚಿವ ಸಿ.ಪಿ.ಯೋಗೇಶ್ವರ್​​​​​

ಜಿಲ್ಲೆಯಲ್ಲಿ ಸಾಕಷ್ಟು ಪ್ರವಾಸಿ ತಾಣಗಳಿದ್ದು, ಮೂಲ ಸೌಕರ್ಯಗಳ ಕೊರತೆಯಿಂದ ಪ್ರವಾಸಿಗರ ಗಮನ ಸೆಳೆಯುವಲ್ಲಿ ಹಿಂದೆ ಬಿದ್ದಿವೆ. ಮುಂದಿನ ದಿನಗಳಲ್ಲಿ ಹೊಸ ಕಾಯಕಲ್ಪ ನೀಡಲಾಗುವುದು. ಪ್ರವಾಸಿ ವರ್ತುಲದಲ್ಲಿ ಜಾನಪದ ಲೋಕವನ್ನು ಸೇರಿಸಲಾಗುವುದು ಎಂದು ಸಚಿವ ಸಿ.ಪಿ.ಯೋಗೇಶ್ವರ್ ಹೇಳಿದರು.

ಸಿಪಿ ಯೋಗೇಶ್ವರ್​
ಸಿಪಿ ಯೋಗೇಶ್ವರ್​

ರಾಮನಗರ: ಪ್ರವಾಸೋದ್ಯಮ ಇಲಾಖೆಯಲ್ಲಿ ಒಂದು ರಾಜ್ಯ ಹಲವು ಜಗತ್ತು ಎಂಬ ವಿಚಾರವಿದೆ. ಅದರಂತೆ ಇಡೀ ಜಗತ್ತು ಸುತ್ತಿದರೆ ನೋಡಬಹುದಾದ ಪ್ರವಾಸಿ ತಾಣಗಳನ್ನು ಕರ್ನಾಟಕದಲ್ಲೇ ನೋಡಬಹುದು ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಹೇಳಿದರು.

ಜಾನಪದ ಲೋಕದಲ್ಲಿ ಆಯೋಜಿಸಲಾಗಿದ್ದ ಮೂರು ದಿನಗಳ ಪ್ರವಾಸಿ ಜಾನಪದ ಲೋಕೋತ್ಸವ ಉದ್ಘಾಟನೆ ಮಾಡಿ ಮಾತನಾಡಿದ ಅವರು, ಜಾನಪದ ಲೋಕವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರವಾಸಿ ತಾಣವಾಗಿ ಬೆಳೆಸಬೇಕು. ಬೆಂಗಳೂರು ನಗರವನ್ನು ಕೇಂದ್ರವಾಗಿ ಇಟ್ಟುಕೊಂಡು ರಾಮನಗರ ಮತ್ತು ಚನ್ನಪಟ್ಟಣವನ್ನು ಪ್ರವಾಸೋದ್ಯಮ ವರ್ತುಲ ಸ್ಥಳವನ್ನಾಗಿ ಮಾಡುವ ಚಿಂತನೆ ಸರ್ಕಾರ ಮಟ್ಟದಲ್ಲಿ ನಡೆಯುತ್ತಿದೆ ಎಂದರು.

ಪ್ರವಾಸಿ ಜಾನಪದ ಲೋಕೋತ್ಸವ

ಜಿಲ್ಲೆಯಲ್ಲಿ ಸಾಕಷ್ಟು ಪ್ರವಾಸಿ ತಾಣಗಳಿದ್ದು, ಮೂಲ ಸೌಕರ್ಯಗಳ ಕೊರತೆಯಿಂದ ಪ್ರವಾಸಿಗರ ಗಮನ ಸೆಳೆಯುವಲ್ಲಿ ಹಿಂದೆ ಬಿದ್ದಿವೆ. ಮುಂದಿನ ದಿನಗಳಲ್ಲಿ ಹೊಸ ಕಾಯಕಲ್ಪ ನೀಡಲಾಗುವುದು. ಪ್ರವಾಸಿ ವರ್ತುಲದಲ್ಲಿ ಜಾನಪದ ಲೋಕವನ್ನು ಸೇರಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಎಸ್.ರಂಗಪ್ಪ, ಜಾನಪದ ಪರಿಷತ್ ಅಧ್ಯಕ್ಷರಾದ ನಿವೃತ್ತ ಐಎಎಸ್ ಅಧಿಕಾರಿ ಟಿ.ತಿಮ್ಮೆಗೌಡ ಮತ್ತಿತರರು ಉಪಸ್ಥಿತರಿದ್ದರು.

ABOUT THE AUTHOR

...view details