ರಾಮನಗರ:ರೈತರಿಗೆ ಕೃಷಿ ಇಲಾಖೆ ಸೌಲಭ್ಯ ಹಾಗೂ ಅಗತ್ಯ ಸಲಹೆಗಳ ಸಮಗ್ರ ಮಾಹಿತಿ ನೀಡಲು ಜೂನ್ 10ರಿಂದ 30ರವರೆಗೆ ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲಿ ಸಮಗ್ರ ಕೃಷಿ ಅಭಿಯಾನ ನಡೆಸಲಾಗುತ್ತಿದೆ ಎಂದು ಜಿಲ್ಲಾ ಕೃಷಿ ಇಲಾಖೆಯ ಉಪ ನಿರ್ದೇಶಕ ಜಿ.ಹೆಚ್.ಯೋಗೇಶ್ ಮಾಹಿತಿ ನೀಡಿದ್ದಾರೆ.
ರಾಮನಗರ ಜಿಲ್ಲೆಯಲ್ಲಿ ಜೂ. 10ರಿಂದ 30ರವರೆಗೆ ಸಮಗ್ರ ಕೃಷಿ ಅಭಿಯಾನ - undefined
ರೈತರಿಗೆ ಕೃಷಿ ಇಲಾಖೆ ಸೌಲಭ್ಯ ಹಾಗೂ ಅಗತ್ಯ ಸಲಹೆಗಳ ಸಮಗ್ರ ಮಾಹಿತಿ ನೀಡಲು ಜೂನ್ 10 ರಿಂದ 30 ರವರೆಗೆ ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲಿ ಸಮಗ್ರ ಕೃಷಿ ಅಭಿಯಾನ ನಡೆಸಲಾಗುತ್ತಿದೆ ಎಂದು ಜಿಲ್ಲಾ ಕೃಷಿ ಇಲಾಖೆಯ ಉಪ ನಿರ್ದೇಶಕ ಜಿ.ಎಚ್.ಯೋಗೇಶ್ ಮಾಹಿತಿ ನೀಡಿದ್ದಾರೆ.
ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಜನಪರ ಮಾಹಿತಿ - ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅವರು, ಜಿಲ್ಲೆಯ ರೈತರ ಮನೆ ಬಾಗಿಲಿಗೆ ಬೆಳೆ ವೈವಿಧ್ಯೀಕರಣ, ವ್ಯವಸಾಯ ವೆಚ್ಚದಲ್ಲಿ ಕಡಿತ, ಕೃಷಿಯೊಂದಿಗೆ ಪೂರಕ ಉಪ ಕಸುಬುಗಳಾದ ಪಶುಸಂಗೋಪನೆ, ರೇಷ್ಮೆ, ಮೀನುಗಾರಿಕೆ ಮುಂತಾದ ಚಟುವಟಿಕೆಗಳ ಬಗ್ಗೆ ರೈತರಿಗೆ ಮಾಹಿತಿ ಒದಗಿಸಲಾಗುವುದು. ಕೃಷಿ ವಸ್ತು ಪ್ರದರ್ಶನ, ಸ್ಥಬ್ಧ ಚಿತ್ರ ಹಾಗೂ ರೈತರೊಂದಿಗೆ ಸಂವಾದ ಕಾರ್ಯಕ್ರಮವನ್ನು ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ನಡೆಸಲಾಗುವುದು. ವಿಜ್ಞಾನಿಗಳು, ಮಾದರಿ ರೈತರು, ತಜ್ಞರೊಂದಿಗೆ ವಿಚಾರ ವಿನಿಮಯ ನಡೆಸಲಾಗುವುದು ಎಂದರು.