ರಾಮನಗರ:ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷ ಸೇರಿರುವ ಸಿಎಂ ಇಬ್ರಾಹಿಂ ಅವರಿಗೆ ರಾಜ್ಯಾಧ್ಯಕ್ಷ ಹುದ್ದೆ ನೀಡುವುದಾಗಿ ಪರೋಕ್ಷವಾಗಿ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ತಿಳಿಸಿದ್ದಾರೆ. ರೇಷ್ಮೆನಗರಿ ರಾಮನಗರದಲ್ಲಿ ಜನತಾ ಜಲಧಾರೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಇದೇ ತಿಂಗಳ 17ಕ್ಕೆ ಇಬ್ರಾಹಿಂರನ್ನು ಪಕ್ಷಕ್ಕೆ ಸೇರಿಸಿಕೊಂಡು ಪಕ್ಷ ಸಂಘಟನೆಯ ಉನ್ನತ ಸ್ಥಾನಮಾನ ನೀಡಲಾಗುವುದು ಎಂದರು.
ರಾಮನಗರದ ದೊಡ್ಡದರ್ಗಾದಲ್ಲಿ ಮಾಜಿ ಸಿಎಂ ಹೆಚ್ಡಿಕೆ ಹಾಗೂ ಸಿಎಂ ಇಬ್ರಾಹಿಂ ಪ್ರಾರ್ಥನೆ ಸಲ್ಲಿಸಿದರು.