ಕರ್ನಾಟಕ

karnataka

ETV Bharat / state

ಜನರ ಕಷ್ಟ ಕೇಳುವುದಕ್ಕಿಂತ ಇವರಿಗೆ ಸಿಎಂ ಕುರ್ಚಿಯದ್ದೇ ಚಿಂತೆ: ನಿಖಿಲ್​ ಕುಮಾರಸ್ವಾಮಿ - ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ

ರಾಜ್ಯದ ಜನರು ಎರಡೂ ರಾಷ್ಟ್ರೀಯ ಪಕ್ಷಗಳ ನಡವಳಿಕೆಗಳನ್ನು ಗಮನಿಸುತ್ತಿದ್ದಾರೆ. ಜನತಾ ದಳ ಪ್ರಾದೇಶಿಕ ಪಕ್ಷವಾಗಿ ಜನರಿಗೆ ತಿಳುವಳಿಕೆ ಮೂಡಿಸಬೇಕಿದೆ. ಆ ಜವಾಬ್ದಾರಿ ನಮ್ಮ ಮೇಲಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.

Nikhil Kumaraswamy
ನಿಖಿಲ್​ ಕುಮಾರಸ್ವಾಮಿ

By

Published : Jun 24, 2021, 8:36 AM IST

ರಾಮನಗರ:ಜನರ ಕಷ್ಟ ಕೇಳುವುದಕ್ಕಿಂತ ಇವರಿಗೆ ಸಿಎಂ ಕುರ್ಚಿಯೇ ಹೆಚ್ಚಾಗಿದೆ. ಜನರಿಗೆ ಯಾರು ಸಿಎಂ ಆಗ್ತಾರೆ ಅನ್ನೋದು ಬೇಕಿಲ್ಲ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಬಿಜೆಪಿ ಹಾಗು ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.

ನಿಖಿಲ್​ ಕುಮಾರಸ್ವಾಮಿ ಹೇಳಿಕೆ

ನಗರಸಭೆ ಆವರಣದಲ್ಲಿ ಪೌರ ಕಾರ್ಮಿಕರು ಹಾಗು ವಾಟರ್ ಬೋರ್ಡ್ ಕಾರ್ಮಿಕರಿಗೆ ಆಹಾರದ ಕಿಟ್ ವಿತರಿಸಿದ ಬಳಿಕ ಬಿಜೆಪಿ, ಕಾಂಗ್ರೆಸ್​​ನಲ್ಲಿ ನಡೆಯುತ್ತಿರುವ ಸಿಎಂ ಕುರ್ಚಿ ಕಿತ್ತಾಟ ವಿಚಾರಕ್ಕೆ ಸಂಬಂಧಿಸಿದಂತೆ ಅವರು ಪ್ರತಿಕ್ರಿಯಿಸಿದರು. ಈಗ ಕೋವಿಡ್‌ ಎರಡನೇ ಅಲೆ ಮುಗಿದು, ಮೂರನೇ ಅಲೆ ಬರಲಿದೆ. ಈಗಾಗಲೇ ಕೆಲವೆಡೆ ಮಕ್ಕಳಿಗೆ ಮೂರನೇ ಅಲೆಯ ವೈರಸ್ ಬಂದಿದೆ. ಸರ್ಕಾರ ಸರಿಯಾಗಿ ಬೆಡ್ ವ್ಯವಸ್ಥೆ ಮಾಡುತ್ತಿಲ್ಲ. ಅದರ ಬಗ್ಗೆ ಗಮನಹರಿಸುವುದನ್ನ ಬಿಟ್ಟು ಸಿಎಂ ಕುರ್ಚಿಗೆ ಕಿತ್ತಾಟ ನಡೆಸುತ್ತಿದ್ದಾರೆ.

ರಾಜ್ಯದ ಜನರು ಎರಡೂ ರಾಷ್ಟ್ರೀಯ ಪಕ್ಷಗಳ ನಡವಳಿಕೆಗಳನ್ನು ಗಮನಿಸುತ್ತಿದ್ದಾರೆ. ಜನತಾ ದಳ ಪ್ರಾದೇಶಿಕ ಪಕ್ಷವಾಗಿ ಜನರಿಗೆ ತಿಳುವಳಿಕೆ ಮೂಡಿಸಬೇಕಿದೆ. ಆ ಜವಾಬ್ದಾರಿ ನಮ್ಮ ಮೇಲಿದೆ. ಆ ಕೆಲಸವನ್ನು ಮಾಡುತ್ತಿದ್ದೇವೆ ಎಂದರು. ರಾಮನಗರ ಜಿಲ್ಲೆ ನಮಗೆ ಮನೆ ಇದ್ದಂತೆ. ನಾನು ರಾಮನಗರ ಜಿಲ್ಲೆಯ ಜತೆಗೆ ರಾಜ್ಯದ ಎಲ್ಲಾ ಜಿಲ್ಲೆಯಲ್ಲಿಯೂ ಸಂಘಟನೆ ಮಾಡುತ್ತಿದ್ದೇನೆ. ಪಕ್ಷ ಸಂಘಟನೆ ಮಾಡುವ ಜವಾಬ್ದಾರಿ ನನ್ನ ಮೇಲಿದೆ. ಈಗಾಗಲೇ ಪಕ್ಷದ ಪದಾಧಿಕಾರಿಗಳನ್ನು ವಿಸರ್ಜನೆ ಮಾಡಲಾಗಿದೆ. ಈ ಕೂಡಲೇ ಎಲ್ಲರನ್ನೂ ಮರು ಆಯ್ಕೆ ಮಾಡಲಾಗುತ್ತದೆ ಎಂದು ತಿಳಿಸಿದರು.

ನಮ್ಮ ಪಕ್ಷದಿಂದ ಸೋಮವಾರ ಬೆಂಗಳೂರಿನಲ್ಲಿ ದೊಡ್ಡ ಮಟ್ಟದ ಪ್ರತಿಭಟನೆ ನಡೆಯಲಿದೆ. ಅಗತ್ಯ ವಸ್ತುಗಳು, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಜೆಡಿಎಸ್ ಹೋರಾಟ ಮಾಡಲಿದೆ ಎಂದು ಇದೇ ವೇಳೆ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.

ABOUT THE AUTHOR

...view details