ರಾಮನಗರ: ಡಿಕೆಶಿ ವಿರುದ್ಧ ಇಡಿ ವಿಚಾರಣೆ ನಡೆಸುವ ಕಾರಣ ಇಟ್ಟುಕೊಂಡು ವಿನಾಕಾರಣ ಅವರಿಗೆ ಕಿರಿಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಕನಕಪುರ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಡಿಕೆಶಿ ಇಡಿ ವಿಚಾರಣೆ : ಕನಕಪುರ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ - ಕನಕಪುರ
ಡಿಕೆಶಿ ವಿರುದ್ದ ಇಡಿ ವಿಚಾರಣೆ ವಿರೋಧಿಸಿ ಜಿಲ್ಲೆಯ ಕನಕಪುರ ನಗರದ ಚನ್ನಬಸಪ್ಪ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಟೈರ್ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ.
ಜಿಲ್ಲೆಯ ಕನಕಪುರ ನಗರದ ಚನ್ನಬಸಪ್ಪ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಟೈರ್ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ನಾಯಕರು ಡಿಕೆಶಿ ಅವರನ್ನು ರಾಜಕೀಯವಾಗಿ ಮುಗಿಸಲು ಶತಪ್ರಯತ್ನ ನಡೆಸುತ್ತಿದ್ದಾರೆ. ಅದಕ್ಕಾಗಿ ಇಡಿಯನ್ನ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದೆಲ್ಲದಕ್ಕೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕಾರಣ ಗುಜರಾತ್ ಶಾಸಕರ ರಕ್ಷಣೆ ಸಂಬಂಧ ಜವಾಬ್ದಾರಿ ಹೊತ್ತಿದ್ದ ಡಿಕೆಶಿ ಅಮಿತ್ ಶಾ ಹೇಳಿದಂತೆ ಕೇಳಿಲ್ಲ ಎನ್ನುವ ಕಾರಣಕ್ಕೆ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ ಕೇವಲ ಡಿಕೆಶಿ ಮೇಲಷ್ಟೇ ಏಕೆ ಪಕ್ಷದ ಎಲ್ಲ ರಾಜಕಾರಣಿಗಳ ವಿರುದ್ಧವೂ ತನಿಖೆಯಾಗಲಿ ಎಂದು ಪ್ರತಿಭಟನೆ ವೇಳೆ ಆಗ್ರಹಿಸಿದರು. ಪ್ರತಿಭಟನೆಯಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ಭಾಗವಹಿಸಿದ್ದರು.