ರಾಮನಗರ: ರಾಮನಗರ ತಾಲೂಕಿನ ಕೈಲಾಂಚ ಗ್ರಾಮದಲ್ಲಿನ ಕರ್ನಾಟಕ ಗ್ರಾಮೀಣ ಬ್ಯಾಂಕ್ ಕಳ್ಳತನಕ್ಕೆ ವಿಫಲಯತ್ನ ನಡೆಸಿರುವುದು ಬೆಳಕಿಗೆ ಬಂದಿದೆ.
ಕರ್ನಾಟಕ ಗ್ರಾಮೀಣ ಬ್ಯಾಂಕ್ಗೆ ಕನ್ನ ಹಾಕಲು ವಿಫಲಯತ್ನ! - Karnataka Rural Bank Theft
ರಾಮನಗರ ತಾಲೂಕಿನ ಕೈಲಾಂಚ ಗ್ರಾಮದಲ್ಲಿನ ಕರ್ನಾಟಕ ಗ್ರಾಮೀಣ ಬ್ಯಾಂಕ್ ಕಳ್ಳತನಕ್ಕೆ ವಿಫಲಯತ್ನ ನಡೆಸಿರುವುದು ಬೆಳಕಿಗೆ ಬಂದಿದೆ.

ಕಳ್ಳರು ಬ್ಯಾಂಕ್ನ ಬಾಗಿಲ ಬೀಗ ಒಡೆದು ಒಳನುಗ್ಗಿ ಸಿಸಿ ಟಿವಿಗೆ ಅಳವಡಿಸಿದ್ದ ಕೇಬಲ್ ವೈರ್ ಕಟ್ ಮಾಡಿದ್ದು, ಮತ್ತೊಂದು ಬಾಗಿಲನ್ನು ಹಾರೆಯಿಂದ ಮೀಟಿ ಒಳನುಗ್ಗಲು ಪ್ರಯತ್ನಿಸಿದ್ದಾರೆ ಎನ್ನಲಾಗಿದೆ. ಕಳ್ಳತನ ಮಾಡಲು ಸಹಾಯಕ್ಕೆ ತಂದಿದ್ದ ಗ್ಯಾಸ್ ಸಿಲಿಂಡರ್, ಹಾರೆ, ಗ್ಯಾಸ್ ಕಟರ್, ಸಣ್ಣಪುಟ್ಟ ಉಪಕರಣಗಳನ್ನು ಸ್ಥಳದಲ್ಲಿಯೇ ಬಿಟ್ಟು ಬರಿಗೈಯಲ್ಲಿ ಪರಾರಿಯಾಗಿದ್ದಾರೆ.
ಬ್ಯಾಂಕ್ ಸಿಬ್ಬಂದಿ ಸೋಮವಾರ ಎಂದಿನಂತೆ ಬ್ಯಾಂಕಿನ ಕೆಲಸಕ್ಕೆ ಹಾಜರಾದಾಗ ಬ್ಯಾಂಕ್ ಕಳ್ಳತನಕ್ಕೆ ಪ್ರಯತ್ನಿಸಿರುವುದು ತಿಳಿದು ಬಂದಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದ ಗ್ರಾಮಾಂತರ ಪೊಲೀಸರು, ಶ್ವಾನದಳ, ಬೆರಳಚ್ಚು ತಜ್ಞರನ್ನು ಕರೆಯಿಸಿ ಪರಿಶೀಲನೆ ನಡೆಸಿದ್ದು ಕಳ್ಳರನ್ನು ಹಿಡಿಯಲು ಬಲೆ ಬೀಸಿದ್ದಾರೆ.