ರಾಮನಗರ :ಕಾಂಗ್ರೆಸ್ ಯಾವಾಗಲೂ ಸಾಮೂಹಿಕ ನಾಯಕತ್ವದಲ್ಲೇ ಹೋಗುವುದು. ಈ ಭಾರಿ ಆ ಭಾರಿ ಅಂತಲ್ಲಾ. ನಮ್ಮದು ಯಾವಾಗಲೂ ಸಾಮೂಹಿಕ ನಾಯಕತ್ವ. ಮೊದಲು ಪಕ್ಷವನ್ನ ಅಧಿಕಾರಕ್ಕೆ ತರಬೇಕು ಅದೇ ನಮ್ಮ ಉದ್ದೇಶವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ರಾಮನಗರ ಜಿಲ್ಲೆ ಕನಕಪುರದಲ್ಲಿ ಮಾತನಾಡಿದ ಅವರು, ಚುನಾವಣೆ ಫಲಿತಾಂಶಕ್ಕೆ ಮುನ್ನೆವೇ ನಾನು ಸಿಎಂ ನಾನು ಸಿಎಂ ಎಂದು ಹೇಳುವುದು ಸರಿಯಲ್ಲ. ಸಿಎಂ ಯಾರಾಗಾಬೇಕು ಎಂಬುದು ಮೈಸೂರಿನಲ್ಲೂ, ಬೆಂಗಳೂರಿನಲ್ಲೂ ಗುಲ್ಬರ್ಗದಲ್ಲೂ ತೀರ್ಮಾನವಾಗುವುದಿಲ್ಲ ಎಂದು ರಾಜ್ಯಸಭೆ ಸದಸ್ಯರಾದ ಮಲ್ಲಿಕಾರ್ಜುನ ಖರ್ಗೆ ಹೇಳಿಗೆ ಡಿಕೆಶಿ ಧ್ವನಿಯಾಗಿದ್ದಾರೆ.