ಕರ್ನಾಟಕ

karnataka

ETV Bharat / state

ಕೊರೊನಾ ಆಸ್ಪತ್ರೆಗೆ ಡಿಕೆಶಿ ಭೇಟಿ.. ಸೋಂಕಿತರಿಗೆ ಧೈರ್ಯ ತುಂಬಿದ ಕನಕಪುರ ಬಂಡೆ - Sudden visit of dk shivkunar to covid hospital

ಕೊರೊನಾ ಸೋಂಕಿತರಿಗೆ ನೀಡುತ್ತಿರುವ ಔಷಧೋಪಚಾರಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು, ಆರೋಗ್ಯಾಧಿಕಾರಿಗಳು, ತಹಶೀಲ್ದಾರ್, ನಗರಸಭೆ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿದರು.

ಡಿಕೆಶಿ ಭೇಟಿ
ಡಿಜೆಶಿ ಭೇಟಿ

By

Published : Apr 22, 2021, 6:02 PM IST

ರಾಮನಗರ: ಕನಕಪುರ ಆರೋಗ್ಯ ಕೇಂದ್ರಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ ನೀಡಿ, ರೋಗಿಗಳಿಗೆ ಸಿಗುತ್ತಿರುವ ಸೌಲಭ್ಯಗಳ ಬಗ್ಗೆ ಖುದ್ದು ಪರಿಶೀಲನೆ ಮಾಡಿದರು.

ಕೊರೊನಾ ಸೋಂಕಿತರಿಗೆ ನೀಡುತ್ತಿರುವ ಔಷಧೋಪಚಾರಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು, ಆರೋಗ್ಯಾಧಿಕಾರಿಗಳು, ತಹಶೀಲ್ದಾರ್, ನಗರಸಭೆ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿದರು. ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 231 ಸೋಂಕಿತರನ್ನು ಭೇಟಿ ಮಾಡಿ ಧೈರ್ಯ ತುಂಬಿದರು.

ಅಗತ್ಯ ಔಷಧೋಪಚಾರಗಳ ಕೊರತೆ ಆಗದಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ABOUT THE AUTHOR

...view details