ಚನ್ನಪಟ್ಟಣ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಹಳ್ಳಕ್ಕೆ ಕೆಎಸ್ಆರ್ಟಿಸಿ ಬಸ್ ನುಗ್ಗಿದ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಬುಡುಗನದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಬೊಮ್ಮನಾಯಕನಹಳ್ಳಿ ಗ್ರಾಮದಿಂದ ಚನ್ನಪಟ್ಟಣಕ್ಕೆ ಕೆಎಸ್ಆರ್ಟಿಸಿ ಬಸ್ ಬರುತ್ತಿದ್ದ ವೇಳೆ, ಬಸ್ನ ಆಕ್ಸಲ್ ಕಟ್ ಆಗಿದೆ. ಬಸ್ನಲ್ಲಿ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ 60 ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿದ್ದರು. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.