ರಾಮನಗರ: ಕಾಡಾನೆಗಳಿಗೆ ಬಸ್ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕೆಎಸ್ಆರ್ಟಿಸಿ ಬಸ್ ಹಳ್ಳಕ್ಕೆ ಬಿದ್ದಿರುವ ಘಟನೆ ಜಿಲ್ಲೆಯ ಕನಕಪುರ ತಾಲೂಕಿನ ಶಿವಗಿರಿ ಕ್ಷೇತ್ರದ ಹನುಮಂತನಕಲ್ಲು ಗ್ರಾಮದ ಬಳಿ ಸಂಭವಿಸಿದೆ.
ಕಾಡಾನೆಗಳಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಹಳ್ಳಕ್ಕೆ ಬಿತ್ತು ಬಸ್ - ಕೆಎಸ್ಆರ್ಟಿಸಿ ಬಸ್
ಶಿವಗಿರಿ ಕ್ಷೇತ್ರದಿಂದ ಬೆಂಗಳೂರಿನತ್ತ ಹೊರಟಿದ್ದ ಕೆಎಸ್ಆರ್ಟಿಸಿ ಬಸ್, ಕಾಡಾನೆಗಳಿಗೆ ಬಸ್ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಹಳ್ಳಕ್ಕೆ ಬಿದ್ದಿರುವ ಘಟನೆ ಜಿಲ್ಲೆಯ ಕನಕಪುರ ತಾಲೂಕಿನ ಶಿವಗಿರಿ ಕ್ಷೇತ್ರದ ಹನುಮಂತನಕಲ್ಲು ಗ್ರಾಮದ ಬಳಿ ನಡೆದಿದೆ.
Ramanagara
ಶಿವಗಿರಿ ಕ್ಷೇತ್ರದಿಂದ ಬೆಂಗಳೂರಿನತ್ತ ಹೊರಟಿದ್ದ ಸಾರಿಗೆ ಬಸ್ ಇದಾಗಿದ್ದು, ಬಸ್ನಲ್ಲಿ ಸುಮಾರು 20 ಮಂದಿ ಪ್ರಯಾಣಿಸುತ್ತಿದ್ದರು. ಬಸ್ ತೆರಳುತ್ತಿದ್ದ ವೇಳೆ ರಸ್ತೆಯಲ್ಲಿ ಏಕಾಏಕಿ ಕಾಡಾನೆಗಳು ಅಡ್ಡ ಬಂದಿದ್ದರಿಂದ ಅವುಗಳಿಗೆ ಡಿಕ್ಕಿ ಹೊಡೆಯುವುದನ್ನ ತಪ್ಪಿಸಲು ಹೋದಾಗ ಚಾಲಕನ ನಿಯಂತ್ರಣ ತಪ್ಪಿ ಬಸ್ ಹಳ್ಳಕ್ಕೆ ಬಿದ್ದಿದೆ.
ಘಟನೆಯಲ್ಲಿ ಸುಮಾರು 14 ಮಂದಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.