ರಾಮನಗರ:ಮಾಗಡಿ ತಾಲೂಕಿನ ಸೋಲೂರು ಹೋಬಳಿ ಕಂಚುಕಲ್ ಗ್ರಾಮದ ಬಳಿ ಕಾಡಿನಿಂದ ನಾಡಿಗೆ ಆಹಾರ ಅರಸಿ ಬಂದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದೆ.
ಕೊನೆಗೂ ಬೋನಿಗೆ ಬಿತ್ತು ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ - ರಾಮನಗರ ಸುದ್ದಿ
ಮಾಗಡಿ ತಾಲೂಕಿನ ಸೋಲೂರು ಹೋಬಳಿ ಕಂಚುಕಲ್ ಗ್ರಾಮದ ಬಳಿ ಕಾಡಿನಿಂದ ನಾಡಿಗೆ ಆಹಾರ ಅರಸಿ ಬಂದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದೆ.
ಕೊನೆಗೂ ಬೋನಿಗೆ ಬಿತ್ತು ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ
ಕಂಚುಕಲ್ ಗ್ರಾಮದ ಸುತ್ತಮುತ್ತ ಕಳೆದ ಒಂದು ತಿಂಗಳಿಂದ ಚಿರತೆ ಹಾವಳಿ ಹೆಚ್ಚಿತ್ತು. ಕಂಚುಕಲ್ ಹಾಗೂ ಬಂಡೇಮಠದ ಸುತ್ತಮುತ್ತಲ ಹಳ್ಳಿಗಳಲ್ಲಿ ನಾಯಿ,ಮೇಕೆಗಳನ್ನು ಹೊತ್ತೊಯ್ದಿದ್ದ ಚಿರತೆ, ರೈತರಿಗೆ ತಲೆ ನೋವಾಗಿ ಪರಿಣಮಿಸಿತ್ತು. ಹೀಗಾಗಿ ಕಳೆದ ಒಂದು ವಾರದಿಂದ ಚಿರತೆಗಾಗಿ ಬೋನಿಟ್ಟಿದ ಅರಣ್ಯ ಇಲಾಖೆ ಅಧಿಕಾರಿಗಳು,ಕೊನೆಗೂ ಚಿರತೆ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಸೆರೆ ಸಿಕ್ಕ ಚಿರತೆಯನ್ನು ಮುತ್ತತ್ತಿ ಅಥವಾ ಬನ್ನೇರುಘಟ್ಟ ಅರಣ್ಯವಪ್ರದೇಶಕ್ಕೆ ಬಿಡಲು ಚಿಂತನೆ ನಡೆಸಲಾಗಿದೆ.