ಕರ್ನಾಟಕ

karnataka

ETV Bharat / state

ಕುಮಾರಸ್ವಾಮಿ ತಪ್ಪು ಮಾಡಿಲ್ಲ, ಅವ್ರು ಯಾವುದಕ್ಕೂ ಹೆದರೊಲ್ಲ: ಅನಿತಾ ಕುಮಾರಸ್ವಾಮಿ - ಅನಿತಾ ಕುಮಾರಸ್ವಾಮಿ

ಹೆಚ್​ಡಿಕೆ ಪ್ರಾಮಾಣಿಕವಾಗಿ ಆಡಳಿತ ನಡೆಸಿದ್ದಾರೆ. ಸಿಬಿಐ ಕೂಡ ಮುಕ್ತ ಹಾಗೂ ಪಾರದರ್ಶಕವಾಗಿ ಕಾರ್ಯನಿರ್ವಹಿಸಬೇಕು ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿದ್ದಾರೆ.

ಅನಿತಾ ಕುಮಾರಸ್ವಾಮಿ

By

Published : Aug 19, 2019, 6:51 PM IST

ರಾಮನಗರ: ನನ್ನ ಪತಿ, ಮಾಜಿ ಸಿಎಂ ಕುಮಾರಸ್ವಾಮಿ ಅವರು ಯಾವುದೇ ತಪ್ಪು ಮಾಡಿಲ್ಲ. ಅವರು ಯಾವುದಕ್ಕೂ ಹೆದರದೇ ಹೋರಾಟ ಮಾಡಿಕೊಂಡು ಬಂದಿದ್ದಾರೆ. ಏನೇ ಆಗಲಿ ಪಾರದರ್ಶಕವಾಗಿ ಸಿಬಿಐ ತನಿಖೆ ನಡೆಯಲಿ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿದ್ದಾರೆ.

ಹೆಚ್​ಡಿಕೆ ಪ್ರಾಮಾಣಿಕವಾಗಿ ಆಡಳಿತ ನಡೆಸಿದ್ದಾರೆ

ನಗರದಲ್ಲಿ ವಿವಿಧ ಕಾಮಗಾರಿಗಳ ಶಂಕು ಸ್ಥಾಪನೆ ‌ಮತ್ತು ಉದ್ಘಾಟನಾ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಹೆಚ್​ಡಿಕೆ ಪ್ರಾಮಾಣಿಕವಾಗಿ ಆಡಳಿತ ನಡೆಸಿದ್ದಾರೆ ಎಂದು ಸಮರ್ಥಿಸಿಕೊಂಡರು.

ಯಡಿಯೂರಪ್ಪ ಪುತ್ರ ವರ್ಗಾವಣೆ ದಂಧೆಯಲ್ಲಿ ತೊಡಗಿದ್ದಾರೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅನಿತಾ, ಈಗಾಗಲೇ ಕುಮಾರಸ್ವಾಮಿ ಅವರು ಆ ಬಗ್ಗೆ ಹೇಳಿಕೆ ನೀಡಿದ್ದಾರೆ. ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಅನಿತಾ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ರು.

ABOUT THE AUTHOR

...view details