ಕರ್ನಾಟಕ

karnataka

ETV Bharat / state

ರಾಮನಗರ: ಎರಡು ಪ್ರತ್ಯೇಕ ರಸ್ತೆ ಅಪಘಾತ ಪ್ರಕರಣ; ಇಬ್ಬರ ಸಾವು, ಐವರಿಗೆ ಗಾಯ - etv bharat karnataka

ಮಿನಿ ಬಸ್​ಗೆ ಕಾರು ಡಿಕ್ಕಿಯಾಗಿ ಯುವಕ ಹಾಗೂ ಯುವತಿ ಸಾವನ್ನಪ್ಪಿದ ಘಟನೆ ಕನಕಪುರದಲ್ಲಿ ನಡೆದಿದೆ.

Etv Bharatman-and-woman-in-the-car-died-in-a-collision-with-a-mini-bus
ರಾಮನಗರ: ಎರಡು ಪ್ರತ್ಯೇಕ ರಸ್ತೆ ಅಪಘಾತ ಪ್ರಕರಣ; ಇಬ್ಬರು ಸಾವು, ಐವರಿಗೆ ಗಾಯ

By ETV Bharat Karnataka Team

Published : Dec 11, 2023, 8:26 PM IST

ರಾಮನಗರ:ಮಿನಿ ಬಸ್​ಗೆ ಕಾರು ಡಿಕ್ಕಿಯಾದ ಪರಿಣಾಮ ಯುವಕ ಹಾಗೂ ಯುವತಿ ಸಾವನ್ನಪ್ಪಿದ ಘಟನೆ ಕನಕಪುರ ತಾಲೂಕಿನ ಕೆಬ್ಬಹಳ್ಳಿ ಗ್ರಾಮದ ಬಳಿ ನಡೆದಿದೆ. ದೀಪಕ್(25),ಶೈಲ(22) ಮೃತರು. ಇವರು ಕನಕಪುರದಿಂದ ಸ್ವಗ್ರಾಮ ಕೆಬ್ಬಹಳ್ಳಿಗೆ ಬರುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಕೋಡಿಹಳ್ಳಿ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ಡಿವೈಡರ್​​ಗೆ ಡಿಕ್ಕಿ, ಐವರಿಗೆ ಗಾಯ(ಚನ್ನಪಟ್ಟಣ):ಟೈಯರ್ ಸ್ಫೋಟಗೊಂಡ ಕಾರೊಂದು ಡಿವೈಡರ್​​ಗೆ ಡಿಕ್ಕಿಯಾಗಿ ಹೊಡೆದ ಪರಿಣಾಮ ಐವರು ಗಾಯಗೊಂಡಿರುವ ಚನ್ನಪಟ್ಟಣ ತಾಲೂಕಿನ ಬೈರಾಪಟ್ಟಣ ಬಳಿ ನಡೆದಿದೆ. ಕಾರಿನಲ್ಲಿ ಚಾಲಕ ಸೇರಿ ಐವರು ಪ್ರಯಾಣಿಕರು ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದರು. ಈ ವೇಳೆ ತಾಲೂಕಿನ ಬೈರಾಪಟ್ಟಣ ಬಳಿ ಬರುತ್ತಿದ್ದಂತೆ ಏಕಾಏಕಿ ಕಾರಿನ ಟೈಯರ್ ಸ್ಫೋಟಗೊಂಡಿದೆ. ಪರಿಣಾಮ ಕಾರು ಡಿವೈಡರ್​​ಗೆ ಡಿಕ್ಕಿ ಹೊಡೆದಿದ್ದರಿಂದ ಕಾರಿನಲ್ಲಿದ್ದ ಒಂದೇ ಕುಟುಂಬದ ಐವರ ಪೈಕಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಚನ್ನಪಟ್ಟಣ ಸಂಚಾರಿ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಗಾಯಗೊಂಡವರನ್ನ ಚನ್ನಪಟ್ಟಣ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಚನ್ನಪಟ್ಟಣ ಸಂಚಾರಿ ಠಾಣೆಯಲ್ಲಿ ದೂರು ದಾಖಲಾಗಿದೆ.

ಇದನ್ನೂ ಓದಿ:ವಿಜಯಪುರ: ಚಿಕಿತ್ಸೆಗೆ ಕರೆದೊಯ್ಯುವಾಗ ಆಂಬ್ಯುಲೆನ್ಸ್ ಅಪಘಾತ; ಶಿಶು ಸಹಿತ ಗರ್ಭಿಣಿ ಸಾವು

ಬಸ್ ಅಪಘಾತ, ಇಬ್ಬರಿಗೆ ಗಂಭೀರ ಗಾಯ(ದಾವಣಗೆರೆ):ಮತ್ತೊಂದೆಡೆ, ಬೆಳಗಾವಿ ಸುವರ್ಣಸೌಧ ಬಳಿ ಸದಾಶಿವ ಆಯೋಗ ವರದಿ ಜಾರಿಗೆ ಪ್ರತಿಭಟನೆಗೆ ಕರೆ ನೀಡಿ ಬೆಳಗಾವಿ ಹೊರಟ್ಟಿದ್ದ 15 ಜನರಿದ್ದ ಬಸ್ ಅಪಘಾತವಾಗಿ ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ದಾವಣಗೆರೆ ನಗರದ ಶಿರಮಗೊಂಡನಹಳ್ಳಿ ರಸ್ತೆ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸೋಮವಾರ ಮುಂಜಾನೆ ಈ ಘಟನೆ ಸಂಭವಿಸಿದೆ.

ಲಾರಿ -ಬಸ್ ನಡುವೆ ಡಿಕ್ಕಿ ಸಂಭವಿಸಿದ್ದು, ಬಸ್​ನಲ್ಲಿದ್ದ 15 ಮಂದಿ ಗಾಯಗೊಂಡಿದ್ದು, ಅವರಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನು ಬಸ್ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಾದಿಗ ದಂಡೋರಾ ಜಾಗೃತಿ ಸಮಿತಿಯ ಬೆಂಗಳೂರು, ಚಿಕ್ಕಬಳ್ಳಾಪುರ, ಚಿಂತಾಮಣಿ ಸೇರಿದಂತೆ ವಿವಿಧ ಜಿಲ್ಲೆಯ ಪದಾಧಿಕಾರಿಗಳು ಬೆಳಗಾವಿಗೆ ಸದಾಶಿವ ಆಯೋಗ ಜಾರಿಗೆ ಆಗ್ರಹಿಸಿ ಕರೆ ನೀಡಿದ್ದ ಸಭೆ ಮತ್ತು ಪ್ರತಿಭಟನೆಗೆ ತೆರಳುತ್ತಿದ್ದರು. ಮುಂಜಾನೆ ಸುಮಾರು 3 ಗಂಟೆಗೆ ಈ ಅಪಘಾತ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಬಸ್ ನಜ್ಜುಗುಜ್ಜಾಗಿದೆ. ಗಾಯಾಳುಗಳನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ದಾವಣಗೆರೆ ಉತ್ತರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

ABOUT THE AUTHOR

...view details