ಕರ್ನಾಟಕ

karnataka

ETV Bharat / state

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಕಾಮುಕನಿಗೆ 10 ವರ್ಷ ಜೈಲು ಶಿಕ್ಷೆ - Man sentenced to 10 years in prison in ramnagar

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಮಂಜುನಾಥ್ ಎಂಬಾತನಿಗೆ ರಾಮನಗರದ ಒಂದನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷ ಜೈಲು ಶಿಕ್ಷೆ ಹಾಗೂ 20 ಸಾವಿರ ದಂಡ ವಿಧಿಸಿದೆ.

ಆರೋಪಿ ಮಂಜುನಾಥ್

By

Published : Oct 3, 2019, 11:45 PM IST

ರಾಮನಗರ:ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ ಕಾಮುಕನಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿ ರಾಮನಗರದ ಒಂದನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಮರಳು ಸಿದ್ದರಾಜು ಆದೇಶ ನೀಡಿದ್ದಾರೆ.

2018ರಲ್ಲಿ ಕನಕಪುರ ನಗರ ಠಾಣೆಯ ಪ್ರಶಾಂತನಗರದಲ್ಲಿ ನಡೆದಿದ್ದ ಘಟನೆಯಲ್ಲಿ 6 ವರ್ಷದ ಹೆಣ್ಣುಮಗುವಿನ ಮೇಲೆ ಆರೋಪಿ ಮಂಜುನಾಥ್ ಲೈಂಗಿಕ ಹಲ್ಲೆ ನಡೆಸಿದ್ದ. ಈತ ತಮಿಳುನಾಡು ಮೂಲದವನಾಗಿದ್ದು, ಕಾಮುಕನಿಂದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿತ್ತು. ಈ ಸಂಬಂಧ ಕನಕಪುರ ನಗರ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಠಾಣೆಯ ವೃತ್ತ ನಿರೀಕ್ಷಕ ಮಲ್ಲೇಶ್​ರಿಂದ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಕೂಡ ಸಲ್ಲಿಸಲಾಗಿತ್ತು.

ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯ, ಆರೋಪಿ ಮಂಜುನಾಥ್​​ಗೆ 10 ವರ್ಷ ಜೈಲು ಶಿಕ್ಷೆ, 20 ಸಾವಿರ ದಂಡ ವಿಧಿಸಿದೆ.

ABOUT THE AUTHOR

...view details