ರಾಮನಗರ :ನಗರದಲ್ಲಿ ಮೂವರು ವ್ಯಕ್ತಿಗಳು ಮ್ಯಾನ್‌ಹೋಲ್‌ಗೆ ಇಳಿದು ಜೀವ ಕಳೆದುಕೊಂಡ ಘಟನೆ ಶುಕ್ರವಾರ ನಡೆದಿದೆ. ಸರ್ಕಾರದ ವತಿಯಿಂದ ತಕ್ಷಣವೇ ಪರಿಹಾರ ಘೋಷಣೆ ಮಾಡಲಾಗಿದೆ.
ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಹಾಗೂ ಹಿಂದುಳಿದ ವರ್ಗಕ್ಕೆ ಸೇರಿದ ಒಬ್ಬರು ಈ ದುರಂತದಲ್ಲಿ ಅಸುನೀಗಿದ್ದಾರೆ. ಪರಿಶಿಷ್ಟ ಜಾತಿಯ ಸಂತ್ರಸ್ತರ ಕುಟುಂಬಗಳಿಗೆ ತಲಾ 18.5 ಲಕ್ಷ ರೂ. ಹಾಗೂ ಹಿಂದುಳಿದ ವರ್ಗದ ಸಂತ್ರಸ್ತ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರವನ್ನು ಸರ್ಕಾರ ತಕ್ಷಣವೇ ಪ್ರಕಟಿಸಿದೆ. ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ. ಎನ್ ಅಶ್ವತ್ಥ್ ನಾರಾಯಣ್ ಈ ವಿಷಯವನ್ನು ತಿಳಿಸಿದ್ದಾರೆ.