ರಾಮನಗರ:ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟದ ಉದ್ಘಾಟನೆ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಉಂಟಾದ ವಾಕ್ಸಮರ ಅತಿರೇಕಕ್ಕೆ ತಿರುಗಿದ ಪರಿಣಾಮ ಮಾಜಿ ಶಾಸಕ ಹೆಚ್ ಸಿ ಬಾಲಕೃಷ್ಣ ಕಾರಿನ ಮೇಲೆ ಕಲ್ಲು ತೂರಿದ ಘಟನೆ ಜಿಲ್ಲೆಯ ಮಾಗಡಿ ತಾಲೂಕಿನ ಕಾಮಸಾಗರ ಗ್ರಾಮದಲ್ಲಿ ಗುರುವಾರ ನಡೆದಿದೆ.
ಕಾರ್ಯಕ್ರಮ ಉದ್ಘಾಟನೆಗೆ ಮೊದಲು ಬಂದಿದ್ದ ಮಾಜಿ ಶಾಸಕ ಬಾಲಕೃಷ್ಣ ಅವರಿಗೆ ಜೆಡಿಎಸ್ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದರು. ಮತ್ತೊಂದೆಡೆ ಇದೇ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿದರು. ಇದೇ ವಿಚಾರಕ್ಕೆ ಕಾಂಗ್ರೆಸ್ ಜೆಡಿಎಸ್ ಕಾರ್ಯಕರ್ತರ ನಡುವೆ ಗಲಾಟೆ ಶುರುವಾಯಿತು.