ರಾಮನಗರ:ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮಗೆ ಕೊರೊನಾ ಪಾಸಿಟಿವ್ ವಿಚಾರಕ್ಕೆ ಸಂಬಂಧಿಸಿದಂತೆ ರಾಮನಗರದಲ್ಲಿ ಶಾಸಕಿ ಅನಿತಾ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.
ದೆಹಲಿಗೆ ಹೋಗಿ ಬಂದಿದ್ದರಿಂದ ಸೋಂಕು ತಗುಲಿರಬಹುದು: ಶಾಸಕಿ ಅನಿತಾ ಕುಮಾರಸ್ವಾಮಿ - Ramnagar
ದೇವೇಗೌಡರು, ಕುಮಾರಸ್ವಾಮಿಯವರು ದೆಹಲಿಗೆ ಹೋಗಿದ್ದರು. ಅಲ್ಲಿಂದ ನಂತರ ಹೊಳೆನರಸಿಪುರದ ಜಾತ್ರಾ ಮಹೋತ್ಸವಕ್ಕೆ ಹೋಗಿದ್ದರು. ಈ ವೇಳೆ ಕೊರೊನಾ ಸೋಂಕು ಹರಡಿರಬಹುದು ಎಂಬ ಶಂಕೆಯಿದೆ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿದರು.
ಪತಿ ಕುಮಾರಸ್ವಾಮಿಯವರು ಕಾರ್ಯಕ್ರಮಕ್ಕೆ ಬರಬೇಕಿತ್ತು. ಅವರಿಗೂ ಕೂಡ ಕೊರೊನಾ ಪರೀಕ್ಷೆ ಮಾಡಲಾಗುತ್ತಿದೆ. ದೇವೇಗೌಡರು, ಕುಮಾರಸ್ವಾಮಿಯವರು ದೆಹಲಿಗೆ ಹೋಗಿದ್ದರು. ಅಲ್ಲಿಂದ ನಂತರ ಹೊಳೆನರಸಿಪುರದ ಜಾತ್ರಾ ಮಹೋತ್ಸವಕ್ಕೆ ಹೋಗಿದ್ದರು. ಈ ವೇಳೆ, ಕೊರೊನಾ ಸೋಂಕು ಹರಡಿರಬಹುದು ಎಂಬ ಶಂಕೆಯಿದೆ. ಕುಮಾರಸ್ವಾಮಿ ಅವರು ರಾಮನಗರಕ್ಕೆ ಬರಬೇಕಿತ್ತು. ಆದರೆ, ಅವರಿಗೂ ಕೂಡ ಕೊರೊನಾ ಪರೀಕ್ಷೆಯಿದ್ದ ಕಾರಣ ಬರಲಾಗಿಲ್ಲ. ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯೇ ನಮ್ಮ ಗುರಿ ಎಂದರು.
ನಗರಸಭೆ ಚುನಾವಣೆ ಘೋಷಣೆಯಾಗಿದ್ದು, ನಮ್ಮ ಅಭ್ಯರ್ಥಿಗಳ ಪಟ್ಟಿ ಸಿದ್ದಗೊಳ್ಳುತ್ತಿದೆ. ಅದಷ್ಟು ಬೇಗ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಇದೇ ವೇಳೆ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.