ರಾಮನಗರ: ಪಾಠ ಮಾಡುತ್ತಿದ್ದ ವೇಳೆ ಶಾಲೆಗೆ ನುಗ್ಗಿ ವಿದ್ಯಾರ್ಥಿನಿಗೆ ಕಚ್ಚಿ ಗಂಭೀರವಾಗಿ ಗಾಯಗೊಳಿಸಿದ್ದ ಕೋತಿಯನ್ನು ರಾಮನಗರದಲ್ಲಿ ಗ್ರಾಮಸ್ಥರು ಕೊನೆಗೂ ಸೆರೆ ಹಿಡಿದಿದ್ದಾರೆ.
ರಾಮನಗರ ತಾಲೂಕಿನ ಕೈಲಾಂಚ ಹೋಬಳಿಯ ನಾಗೋಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರು ಪಾಠ ಮಾಡುತ್ತಿದ್ದ ವೇಳೆ ಕೊಠಡಿ ಒಳಗೆ ನುಗ್ಗಿದ ಕೋತಿ, ಲಿಖಿತಾ (10) ಎಂಬ ವಿದ್ಯಾರ್ಥಿಗೆ ಕಚ್ಚಿ ಗಂಭೀರವಾಗಿ ಗಾಯಗೊಳಿಸಿತ್ತು.