ರಾಮನಗರ :ಸೊಸೆಯೊಂದಿಗೆ ಅಕ್ರಮ ಸಂಬಂಧ ಹೊಂದಿರುವ ಆರೋಪ ಹಿನ್ನೆಲೆ ಸಂಬಂಧಿಕರೇ ವೃದ್ದನ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಮಾಗಡಿ ತಾಲೂಕಿನಲ್ಲಿ ನಡೆದಿದೆ.
ಸೊಸೆಯೊಂದಿಗೆ ಅಕ್ರಮ ಸಂಬಂಧ ಶಂಕೆ... ವೃದ್ಧನ ಕೊಲೆ - Kannada news
ಜಮೀನಿನಲ್ಲಿ ಕೇಲಸ ಮಾಡುತ್ತಿದ್ದ ವ್ಯಕ್ತಿಯನ್ನು ಸೊಸೆಯೊಂದಿಗೆ ಅಕ್ರಮ ಸಂಬಂಧ ಹೊಂದಿರುವ ಶಂಕೆಯಲ್ಲಿ ಕೊಲೆ ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ವೃದ್ಧನ ಕೊಲೆ
ಜಿಲ್ಲೆಯ ಮಾಗಡಿ ತಾಲೂಕಿನ ಸೋಲೂರು ಹೋಬಳಿಯ ಕೊಟುಗಾನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು ಮಟುಕೇರಯ್ಯ (75) ತನ್ನ ಜಮೀನಿನಲ್ಲಿ ಕೆಲಸ ಮಾಡುವಾಗ ಸಂಬಂಧಿಕರು ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಸೊಸೆಯೊಂದಿಗೆ ಅಕ್ರಮ ಸಂಬಂಧ ಇಟ್ಟಿಕೊಂಡಿದ್ದ ಎಂಬ ಹಿನ್ನೆಲೆಯಲ್ಲಿ ಆಗಾಗ ಗಲಾಟೆ ಕೂಡ ನಡೆಯಿತು ಎನ್ನಲಾಗಿದ್ದು, ಕೊಲೆಯಲ್ಲಿ ಅಂತ್ಯ ಕಂಡಿದೆ. ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.