ಕರ್ನಾಟಕ

karnataka

ETV Bharat / state

ಲಾರಿಗೆ ಆ್ಯಂಬುಲೆನ್ಸ್ ಡಿಕ್ಕಿ.. ರೋಗಿ ಸಂಬಂಧಿಕ ಸ್ಥಳದಲ್ಲೇ ಸಾವು!

ಸಾವನ್ನಪ್ಪಿದವರ ಮೃತದೇಹ ಹಾಗೂ ಆ್ಯಂಬುಲೆನ್ಸ್​ನಲ್ಲಿದ್ದ ರೋಗಿಯನ್ನು ಚನ್ನಪಟ್ಟಣ ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಕುರಿತು ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

ambulance collide with lorry
ಲಾರಿಗೆ ಆ್ಯಂಬುಲೆನ್ಸ್ ಡಿಕ್ಕಿ

By

Published : Mar 15, 2022, 12:39 PM IST

ರಾಮನಗರ: ಚಲಿಸುತ್ತಿದ್ದ ಲಾರಿಗೆ ಆ್ಯಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿದ ಘಟನೆ ಬೆಂಗಳೂರು-ಮೈಸೂರು ಹೆದ್ದಾರಿಯ ಚನ್ನಪಟ್ಟಣ ತಾಲೂಕಿನ ಸಾತನೂರು ಸರ್ಕಲ್ ಬಳಿ ನಡೆದಿದೆ.

ಮಂಡ್ಯದಿಂದ ಬೆಂಗಳೂರಿಗೆ ರೋಗಿಯನ್ನು ಆ್ಯಂಬುಲೆನ್ಸ್​​ನಲ್ಲಿ ಕರೆದುಕೊಂಡು ಹೋಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಚಾಲಕನ ಪಕ್ಕದಲ್ಲಿ ಕುಳಿತಿದ್ದ ರೋಗಿಯ ಸಂಬಂಧಿಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ:ಬೆಳ್ತಂಗಡಿ: ಚಿರತೆ ಓಡಾಟದ ಚಿತ್ರ ಸೆರೆ - ಸ್ಥಳೀಯರಲ್ಲಿ ಆತಂಕ

ಸಾವನ್ನಪ್ಪಿದವರ ಮೃತದೇಹ ಹಾಗೂ ಆ್ಯಂಬುಲೆನ್ಸ್​ನಲ್ಲಿದ್ದ ರೋಗಿಯನ್ನು ಚನ್ನಪಟ್ಟಣ ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಕುರಿತು ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details