ರಾಮನಗರ: ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ಕೇಸ್ ಪತ್ತೆಯಾಗಿರೋದರಿಂದ ಜನರಲ್ಲಿ ಆತಂಕ ಮನೆ ಮಾಡಿದೆ. ಇಂದಿನ ಹೆಲ್ತ್ ಬುಲೆಟಿನ್ನಲ್ಲಿ ಜಿಲ್ಲೆಯಲ್ಲಿ ಮತ್ತೊಂದು ಕೇಸ್ ಪತ್ತೆಯಾಗಿದೆ ಎಂದು ದೃಢೀಕರಿಸಲಾಗಿದೆ.
ರಾಮನಗರದಲ್ಲಿ ಮತ್ತೊಂದು ಕೊರೊನಾ ಕೇಸ್ ಪತ್ತೆ.. - one more Corona Case confirmed in Ramnagar
ಸದ್ಯ ಆರೋಗ್ಯ ಇಲಾಖೆ ಅಧಿಕಾರಿಗಳು ಈ ವ್ಯಕ್ತಿಯ ಪ್ರಯಾಣದ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಜಿಲ್ಲೆಯಲ್ಲಿ 2ನೇ ಪಾಸಿಟಿವ್ ಪ್ರಕರಣ ಇದಾಗಿದೆ.
ರಾಮನಗರದಲ್ಲಿ ಮತ್ತೊಂದು ಕೊರೊನಾ ಪ್ರಕರಣ ದೃಢ
ಜಿಲ್ಲೆಯ ಟೌನ್ ಕುಂಬಾರ ಬೀದಿ ನಿವಾಸಿ 57 ವರ್ಷದ ವ್ಯಕ್ತಿಗೆ ಸೋಂಕು ತಗುಲಿದೆ. ಈತ ಪಿ-3313 ನಂಬರ್ ಆಗಿದ್ದು, ಈ ಹಿಂದೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ಆಸ್ಪತ್ರೆಗೆ ದಾಖಲಾಗಿದ್ದ.
ಕೊರೊನಾ ತಪಾಸಣೆ ನಡೆಸಿದ ಬಳಿಕ ಪಾಸಿಟಿವ್ ವರದಿ ಬಂದಿದೆ. ಸದ್ಯ ಆರೋಗ್ಯ ಇಲಾಖೆ ಅಧಿಕಾರಿಗಳು ಈ ವ್ಯಕ್ತಿಯ ಪ್ರಯಾಣದ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಜಿಲ್ಲೆಯಲ್ಲಿ 2ನೇ ಪಾಸಿಟಿವ್ ಪ್ರಕರಣ ಇದಾಗಿದೆ. ಈ ಹಿಂದೆ 2 ವರ್ಷದ ಮಗುವಿಗೆ ಕೊರೊನಾ ಸೋಂಕು ತಗುಲಿತ್ತು.