ರಾಮನಗರ:ಜಿಲ್ಲೆಯಲ್ಲಿ ಇಂದು ಮತ್ತೊಂದು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಜನರಲ್ಲಿ ಆತಂಕ ಮೂಡಿಸಿದೆ.
ರಾಮನಗರದಲ್ಲಿ ಮತ್ತೊಂದು ಕೊರೊನಾ ಪ್ರಕರಣ ಪತ್ತೆ - ಕೊರೊನಾ ಪಾಸಿಟಿವ್
ರಾಮನಗರ ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಒಟ್ಟು 3 ಪ್ರಕರಣಗಳು ದಾಖಲಾಗಿವೆ.
![ರಾಮನಗರದಲ್ಲಿ ಮತ್ತೊಂದು ಕೊರೊನಾ ಪ್ರಕರಣ ಪತ್ತೆ ರಾಮನಗರದಲ್ಲಿ ಮತ್ತೊಂದು ಕೊರೊನಾ ಪ್ರಕರಣ](https://etvbharatimages.akamaized.net/etvbharat/prod-images/768-512-7475181-thumbnail-3x2-mng.jpg)
ರಾಮನಗರದಲ್ಲಿ ಮತ್ತೊಂದು ಕೊರೊನಾ ಪ್ರಕರಣರಾಮನಗರದಲ್ಲಿ ಮತ್ತೊಂದು ಕೊರೊನಾ ಪ್ರಕರಣ
ಕಳೆದ 3 ದಿನಗಳ ಹಿಂದೆ ವೃದ್ಧನೊಬ್ಬನಿಗೆ ಕೊರೊನಾ ದೃಢವಾಗಿತ್ತು. ಇದೀಗ ಆತನ ಮಗನಿಗೂ ಕೊರೊನಾ ಪಾಸಿಟಿವ್ ಬಂದಿದ್ದು, ಕಂದಾಯ ಭವನದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇಲ್ಲಿನ ಕುಂಬಾರ ಬೀದಿ ನಿವಾಸಿ 23 ವರ್ಷದ ಯುವಕನಿಗೆ ಕೊರೊನಾ ದೃಢವಾಗಿದೆ. ಈ ಹಿನ್ನೆಲೆಯಲ್ಲಿ ಎಂಜಿ ರಸ್ತೆಯನ್ನು ಸೀಲ್ ಡೌನ್ ಮಾಡಲಾಗಿದೆ. ಇಲ್ಲಿಯವರೆಗೆ ಜಿಲ್ಲೆಯಲ್ಲಿ ಒಟ್ಟು 3 ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.