ಕರ್ನಾಟಕ

karnataka

ETV Bharat / state

ಅಭಿವೃದ್ಧಿಗೆ ಕೃತಜ್ಞತೆ.. ಮಾಜಿ ಸಿಎಂ ಕುಮಾರಸ್ವಾಮಿಗೆ ಜೋಡೆತ್ತು ಗಿಫ್ಟ್​ ನೀಡಿದ ಗ್ರಾಮಸ್ಥರು - People gave bulls gift to former CM HD Kumaraswamya

ಮದ್ದೂರು ತಾಲೂಕಿನ ಕೋಣಸಾಲೆ ಗ್ರಾಮವನ್ನು ಅಭಿವೃದ್ಧಿ ಮಾಡಿದರು ಎಂಬ ಕಾರಣಕ್ಕಾಗಿ ಆ ಗ್ರಾಮಸ್ಥರು ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ ಅವರಿಗೆ ಹಳ್ಳಿಕಾರ್​ ತಳಿಯ ಜೋಡೆತ್ತುಗಳನ್ನು ಉಡುಗೊರೆಯಾಗಿ ನೀಡಿ ಅಭಿಮಾನ ಮೆರೆದಿದ್ದಾರೆ. ಅಲ್ಲದೇ, ಮುಂದಿನ ದಿನಗಳಲ್ಲಿ ಅವರು ಸಿಎಂ ಆಗಬೇಕೆಂದು ಹರಕೆ ಹೊತ್ತಿದ್ದಾರೆ.

kumaraswamya
ಕುಮಾರಸ್ವಾಮಿ

By

Published : Mar 12, 2022, 6:20 PM IST

Updated : Mar 12, 2022, 6:32 PM IST

ರಾಮನಗರ:ನಾಗಮಂಗಲ ತಾಲೂಕಿನ ಕೋಣಸಾಲೆ ಗ್ರಾಮಸ್ಥರು ಮಾಜಿ ಮುಖ್ಯಮಂತ್ರಿ ಹೆಚ್​.ಡಿ. ಕುಮಾರಸ್ವಾಮಿ ಅವರಿಗೆ ಹಳ್ಳಿಕಾರ್ ತಳಿಯ ಜೋಡೆತ್ತುಗಳನ್ನು ಉಡುಗೊರೆಯಾಗಿ ನೀಡಿದ್ದಾರೆ.

ನಾಗಮಂಗಲ ವಿಧಾನಸಭಾ ಕ್ಷೇತ್ರಕ್ಕೆ ಸೇರಿದ ಮದ್ದೂರು ತಾಲೂಕಿನ ಕೋಣಸಾಲೆ ಗ್ರಾಮಕ್ಕೆ ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ ಅವರು ಮೂಲಸೌಕರ್ಯಗಳನ್ನು ಒದಗಿಸಿಕೊಟ್ಟಿದ್ದರು. ಇದರಿಂದ ಸಂತಸಗೊಂಡ ಜನರು ಅವರಿಗೆ ಎರಡು ಎತ್ತುಗಳನ್ನು ಉಡುಗೊರೆಯಾಗಿ ನೀಡಿದ್ದಾರೆ.

ಮಾಜಿ ಸಿಎಂ ಕುಮಾರಸ್ವಾಮಿಗೆ ಜೋಡೆತ್ತು ಗಿಫ್ಟ್​ ನೀಡಿದ ಗ್ರಾಮಸ್ಥರು

ಹೆಚ್‌ಡಿಕೆ ಅವರು ಮುಖ್ಯಮಂತ್ರಿ ಆಗಿದ್ದ ವೇಳೆ ತಮ್ಮೂರಿಗೆ ರಸ್ತೆ ಹಾಗೂ ಮೂಲಭೂತ ಸೌಕರ್ಯಗಳಿಗೆ ಒತ್ತು ನೀಡಿದ್ದರು. ರೈತರ ಸಾಲ ಮನ್ನಾ ಸೇರಿದಂತೆ ವಿವಿಧ ಜನಪರ ಯೋಜನೆಗಳನ್ನು ರಾಜ್ಯದ ರೈತಾಪಿ ವರ್ಗಕ್ಕೆ ನೀಡಿದ್ದಾರೆ. ರೈತಪರ ಚಿಂತನೆಯುಳ್ಳ ಹೆಚ್‌ಡಿಕೆ ಅವರು ಮತ್ತೊಮ್ಮೆ ಸಿಎಂ ಆಗಬೇಕೆಂದು ಮಲೈಮಹದೇಶ್ವರಸ್ವಾಮಿಯ ಸನ್ನಿಧಿಯಲ್ಲಿ ನಡೆದ ಜಾನುವಾರು ಜಾತ್ರೆಯಲ್ಲಿ ಜೋಡೆತ್ತುಗಳನ್ನು ಉಡುಗೊರೆಯಾಗಿ ನೀಡಲಾಗಿದೆ ಎಂದು ಗ್ರಾಮಸ್ಥರು ಹೇಳಿದರು.

ಚೊಟ್ಟನಹಳ್ಳಿ ಗ್ರಾಮದಲ್ಲಿ ಮಲೆಮಹದೇಶ್ವರ ಸ್ವಾಮಿಯ 37ನೇ ವಾರ್ಷಿಕ ಪೂಜಾ ಕಾರ್ಯಕ್ರಮ ಹಾಗೂ ಜಾನುವಾರುಗಳ ಜಾತ್ರೆಯನ್ನು ಏರ್ಪಡಿಸಲಾಗಿತ್ತು. ಈ ಜಾತ್ರೆಯಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ವಿಶೇಷ ಪೂಜಾ ಕೈಂಕರ್ಯದಲ್ಲಿ ಪಾಲ್ಗೊಂಡು ಪ್ರಾರ್ಥನೆ ಸಲ್ಲಿಸಿದರು.

ಬಳಿಕ ಹೆಚ್‌ಡಿಕೆ ಅವರನ್ನು ಎತ್ತಿನಗಾಡಿ ಮೂಲಕ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡಿ ಗ್ರಾಮಸ್ಥರು ಅಭಿಮಾನ ಮೆರೆದಿದ್ದರು. ರೈತರ ಸಾಲಮನ್ನಾ ಸೇರಿದಂತೆ ನಾಡಿನ ರೈತರಿಗೆ ಹಲವು ಸವಲತ್ತು ಒದಗಿಸಿದ್ದ ಮಾಜಿ ಸಿಎಂ ಹೆಚ್‌ಡಿಕೆ ಅವರು ಮತ್ತೆ ಅಧಿಕಾರಕ್ಕೆ ಬರಬೇಕೆಂದು ಮಲೆಮಹದೇಶ್ವರ ಸ್ವಾಮಿಯಲ್ಲಿ ಹರಕೆ ಹೊತ್ತಿರುವ ಜನರು, ಹಳ್ಳಿಕಾರ್ ತಳಿಯ ಜೋಡೆತ್ತುಗಳನ್ನು ಹೆಚ್‌ಡಿಕೆ ಅವರಿಗೆ ನೀಡಿದರು. ಬಳಿಕ ಎತ್ತುಗಳನ್ನು ಬಿಡದಿಯ ಕೇತಗಾನಹಳ್ಳಿಯಲ್ಲಿರುವ ಹೆಚ್​ಡಿಕೆ ಅವರ ತೋಟದ ಮನೆಗೆ ಕರೆತಂದು ಪೂಜೆ ಸಲ್ಲಿಸಿದ ನಂತರ ಮಾಜಿ ಸಿಎಂಗೆ ಒಪ್ಪಿಸಿದರು.

ಓದಿ:ಸಿ.ಎಂ. ಇಬ್ರಾಹಿಂ ಪಕ್ಷ ತೊರೆದ್ರೆ ಪಕ್ಷಕ್ಕೆ ಏನೂ ತೊಂದರೆ ಇಲ್ಲ: ಆಪ್ತನ ಕೈಬಿಟ್ಟ ಸಿದ್ದರಾಮಯ್ಯ

Last Updated : Mar 12, 2022, 6:32 PM IST

ABOUT THE AUTHOR

...view details