ರಾಮನಗರ:ಸಂಗೀತ ಕಲಿಸುವ ನೆಪದಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಪ್ರಕರಣ ಜಿಲ್ಲೆಯ ಮಾಗಡಿ ತಾಲೂಕಿನ ಕುದೂರು ಪಟ್ಟಣದಲ್ಲಿ ಬೆಳಕಿಗೆ ಬಂದಿದೆ.
ಕುದೂರಿನ ನಿವಾಸಿ ರಾಮಾಂಜನೇಯ (48) ಎಂಬಾತ ಕೃತ್ಯ ಎಸಗಿರುವ ಆರೋಪಿಯಾಗಿದ್ದು, ಆತನನ್ನು ಬಂಧಿಸಲಾಗಿದೆ. 15 ವರ್ಷದ ಬಾಲಕಿಗೆ ಸಂಗೀತ ಹೇಳಿಕೊಡುವ ನೆಪದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಶಾಲೆಗೆ ತೆರಳಿದ್ದ ಬಾಲಕಿಯು ಹೊಟ್ಟೆ ನೋವು ಎಂದು ಹೇಳಿದಾಗ ಪೋಷಕರನ್ನು ಕರೆಸಿ ವಿಚಾರಿಸಲಾಗಿತ್ತು. ಬಳಿಕ ಚಿಕಿತ್ಸೆ ಕೊಡಿಸುವಂತೆ ಶಿಕ್ಷಕರು ಪೋಸಕರ ಜೊತೆ ಬಾಲಕಿಯನ್ನು ಆಸ್ಪತ್ರೆಗೆ ಕಳುಹಿಸಿದ್ದರು. ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಮಗಳು ಗರ್ಭಿಣಿಯಾಗಿರುವ ವಿಚಾರ ಪೋಷಕರಿಗೆ ಗೊತ್ತಾಗಿದೆ.
ಬಳಿಕ ಪೋಷಕರು ಬಾಲಕಿಯನ್ನು ವಿಚಾರಿಸಿದಾಗ ಸಂಗೀತ ಮಾಸ್ಟರ್ ಕೃತ್ಯದ ಬಗ್ಗೆ ತಿಳಿಸಿದ್ದಾಳೆ. ವಿಷಯ ತಿಳಿದ ಪೋಷಕರು ಆರೋಪಿ ವಿರುದ್ಧ ಕುದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಈ ಬಗ್ಗೆ ಆರೋಪಿ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:6 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ: ಹೋಮ್ ನರ್ಸ್ಗೆ 20 ವರ್ಷಗಳ ಕಾರಾಗೃಹ ಶಿಕ್ಷೆ