ರಾಮನಗರ: ನಗರದ 12ನೇ ವಾರ್ಡ್ನ ನಿವಾಸಿ ಸರ್ಕಾರಿ ಆಸ್ಪತ್ರೆಯ ವೈದ್ಯರೊಬ್ಬರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ತಾಲೂಕಿನ ಸುಗ್ಗನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಯಾಗಿರುವ ಇವರು ನೂರಾರು ರೋಗಿಗಳಿಗೆ ಚಿಕಿತ್ಸೆ ನೀಡಿದ್ದಾರೆ ಎನ್ನಲಾಗಿದೆ.
ವೈದ್ಯಾಧಿಕಾರಿಗೂ ತಗುಲಿದ ಕೊರೊನಾ: ಚಿಕಿತ್ಸೆ ಪಡೆದವರಲ್ಲಿ ಆತಂಕ - Corona for government doctors
ಸುಗ್ಗನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗೆ ಕೊರೊನಾ ಸೋಂಕು ದೃಢವಾಗಿದೆ. ಅಲ್ಲದೆ ಸುಮಾರು 300ಕ್ಕೂ ಅಧಿಕ ಮಂದಿ ಇವರ ಬಳಿ ಚಿಕಿತ್ಸೆ ಪಡೆದಿದ್ದರು ಎನ್ನಲಾಗಿದೆ. ಇದೀಗ ಚಿಕಿತ್ಸೆ ಪಡೆದವರಲ್ಲೂ ಆತಂಕ ಶುರುವಾಗಿದೆ.
ಜಿಲ್ಲಾ ಆರೋಗ್ಯಾಧಿಕಾರಿಗಳ ಕಚೇರಿ ಹಿಂಭಾಗದಲ್ಲಿರುವ ಮನೆಯನ್ನು ಸೀಲ್ ಡೌನ್ ಮಾಡಲಾಗಿದೆ. ಇವರ ಪತ್ನಿ ಮಾಲೀಕತ್ವದ ನಿಧಾ ನರ್ಸಿಂಗ್ ಹೋಮ್ ಕೂಡ ಸೀಲ್ ಡೌನ್ ಮಾಡಲಾಗಿದೆ.
ಸುಮಾರು 300ಕ್ಕೂ ಅಧಿಕ ಮಂದಿ ಇಲ್ಲಿಗೆ ಭೇಟಿ ನೀಡಿ ಚಿಕಿತ್ಸೆ ಪಡೆದಿದ್ದರು ಎನ್ನಲಾಗಿದೆ. ಕಳೆದ 10 ದಿನಗಳಿಂದ ನರ್ಸಿಂಗ್ ಹೋಮ್ ಹಾಗೂ ಸುಗ್ಗನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಚಿಕಿತ್ಸೆ ಪಡೆದ ಸಾರ್ವಜನಿಕರು ಕೂಡಲೇ ಕೊರೊನಾ ತಪಾಸಣೆಗೆ ಒಳಗಾಗಬೇಕು. ಸ್ವಯಂ ಕ್ವಾರಂಟೈನ್ಗೆ ಒಳಗಾಗಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳ ಕಚೇರಿ ಹಾಗೂ ನಗರಸಭೆ ಅಧಿಕಾರಿಗಳು ಮನವಿ ಮಾಡಿದ್ದಾರೆ.