ಕರ್ನಾಟಕ

karnataka

By

Published : Apr 22, 2023, 6:41 PM IST

ETV Bharat / state

ಏ. 30 ಕ್ಕೆ ಚನ್ನಪಟ್ಟಣಕ್ಕೆ ಪ್ರಧಾನಿ ಆಗಮನ: ಬೃಹತ್​ ಸಮಾವೇಶಕ್ಕೆ ವೇದಿಕೆ ನಿರ್ಮಾಣ

ಬೃಹತ್​ ಸಮಾವೇಶದಲ್ಲಿ 2 ಲಕ್ಷಕ್ಕೂ ಅಧಿಕ ಕಾರ್ಯಕರ್ತರು ಭಾಗಿಯಾಗುವ ನಿರೀಕ್ಷೆ ಇದೆ ಎಂದಿದ್ದಾರೆ ಸಿ ಪಿ ಯೋಗೇಶ್ವರ್​

Former Minister C P Yogeshwar
ಮಾಜಿ ಸಚಿವ ಸಿ ಪಿ ಯೋಗೇಶ್ವರ

ಏ. 30 ಕ್ಕೆ ಚನ್ನಪಟ್ಟಣಕ್ಕೆ ಪ್ರಧಾನಿ ಆಗಮನ: ಬೃಹತ್​ ಸಮಾವೇಶಕ್ಕೆ ವೇದಿಕೆ ನಿರ್ಮಾಣ

ರಾಮನಗರ:ಬೊಂಬೆನಗರಿ ಚನ್ನಪಟ್ಟಣದಲ್ಲಿ ಚುನಾವಣೆಯ ಕಣ ರಂಗೇರಿದೆ. ಇದೇ ಏ. 30ಕ್ಕೆ ಚನ್ನಪಟ್ಟಣಕ್ಕೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ ಎಂದು ಮಾಜಿ ಸಚಿವ ಸಿ ಪಿ ಯೋಗೇಶ್ವರ್ ತಿಳಿಸಿದ್ದಾರೆ.

ಈ ಕುರಿತು ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ ತಾಲೂಕಿನ ಮತ್ತಿಕೆರೆ ಗ್ರಾಮದ ಬಳಿ ಬೃಹತ್ ವೇದಿಕೆ ನಿರ್ಮಾಣ ಮಾಡಲು 30 ಎಕರೆಯಲ್ಲಿ ವೇದಿಕೆ ನಿರ್ಮಾಣ ಮಾಡಲಾಗುತ್ತಿದೆ. ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲಲು ಪ್ಲಾನ್ ಮಾಡಲಾಗಿದ್ದು, ಇದರಿಂದ ಚನ್ನಪಟ್ಟಣದಲ್ಲಿ ಬೃಹತ್ ಸಮಾವೇಶ ಆಯೋಜನೆ ಮಾಡಲಾಗಿದೆ. ಈ ವೇದಿಕೆಯಲ್ಲಿ ಸುಮಾರು 10ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರು ಭಾಗಿಯಾಗಲಿದ್ದು, ಮಂಡ್ಯ ಹಾಗೂ ರಾಮನಗರ ಜಿಲ್ಲೆಗಳು ಒಳಗೊಂಡಂತೆ ಸಮಾವೇಶ ಮಾಡಲಾಗುವುದು ಎಂದರು.

2 ಲಕ್ಷಕ್ಕೂ ಅಧಿಕ ಕಾರ್ಯಕರ್ತರು ಭಾಗಿಯಾಗುವ ನಿರೀಕ್ಷೆ ಹೊಂದಲಾಗಿದ್ದು, ಚನ್ನಪಟ್ಟಣ ತಾಲೂಕಿನ ಮತ್ತಿಕೆರೆ ಗ್ರಾಮದ ಬಳಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದೆ. ಸುಮಾರು 30 ಎಕರೆಯಲ್ಲಿ ವೇದಿಕೆ ನಿರ್ಮಾಣ ಮಾಡಲಾಗಿದೆ. ಕೋಲಾರದಲ್ಲಿ ಸಮಾವೇಶ ಮುಗಿಸಿ ಮಧ್ಯಾಹ್ನ 2 ಗಂಟೆಗೆ ಚನ್ನಪಟ್ಟಣಕ್ಕೆ ಆಗಮಿಸಲಿದ್ದು, ಚನ್ನಪಟ್ಟಣದಲ್ಲಿ ಸಮಾವೇಶಕ್ಕೆ ಅವಕಾಶ ಕೊಟ್ಟಿದ್ದು ಖುಷಿ ತಂದಿದೆ. ರಾಮನಗರ ರಾಜಕೀಯ ಇತಿಹಾಸದಲ್ಲಿ ಇದೊಂದು ಅದ್ಭುತ ಕಾರ್ಯಕ್ರಮ ಆಗಲಿದೆ ಎಂದು ಮಾಜಿ ಸಚಿವ ಸಿ ಪಿ ಯೋಗೇಶ್ವರ್ ತಿಳಿಸಿದರು.

ಇದನ್ನೂ ಓದಿ:ಬಸವಣ್ಣನ ಐಕ್ಯಮಂಟಪಕ್ಕೆ ನಾಳೆ ರಾಹುಲ್ ಗಾಂಧಿ ಭೇಟಿ.... ಎಂ ಬಿ ಪಾಟೀಲ್​​

ABOUT THE AUTHOR

...view details