ರಾಮನಗರ: ರಾಮನಗರ ಗ್ರಾಮಾಂತರ ಠಾಣೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಸೂಕ್ತ ದಾಖಲೆಗಳಿಲ್ಲದೇ ದೇಶದಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ 7 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಿದ್ದಾರೆ.
'ನಗರದ ಹೊರವಲಯದ ಬಸವನಪುರ ಗ್ರಾಮದಲ್ಲಿರುವ ಗಾರ್ಮೆಂಟ್ಸ್ ಫ್ಯಾಕ್ಟರಿಯಲ್ಲಿ ಅಕ್ರಮವಾಗಿ ವಿದೇಶಿ ಪ್ರಜೆಗಳು ಬಂದು ಕೆಲಸ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿದೆ. ಈ ವೇಳೆ ಮೊಹಮ್ಮದ್ ಸೊಹಿಲ್ ರಾಣಾ, ಜುಲ್ಸಿಕರ್ ಅಲಿ, ಉಜಲ್, ಮೊಹಮ್ಮದ್ ಮಿನ್ಹಾ ಜುಲ್ ಹುಸ್ಸೆನ್, ಮುಸ್ಸಾ ಶೇಖ್, ರಹೀಂ, ಮತ್ತು ಆರಿ ಫುಲ್ ಇಸ್ಲಾಂ ಎಂಬುವರನ್ನು ಬಂಧಿಸಲಾಗಿದೆ' ಅಂತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಬಾಬು ಮಾಹಿತಿ ನೀಡಿದ್ದಾರೆ.