ರಾಮನಗರ :ಚನ್ನಪಟ್ಟಣ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಯಾರಬ್ ನಗರದಲ್ಲಿ ದಾಳಿ ನಡೆಸಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಅಕ್ರಮ ಗಾಂಜಾ ಮಾರಾಟ : ಇಬ್ಬರು ಆರೋಪಿಗಳ ಬಂಧನ - Illigaly selling marijuana
ಯಾರಬ್ ನಗರದಲ್ಲಿ ಪೊಲೀಸರು ದಾಳಿ ನಡೆಸಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ.
ರಾಮನಗರ ಇಮ್ರಾನ್ ಹಾಗೂ ಚನ್ನಪಟ್ಟಣ ತಾಲೂಕಿನ ಸಂಕಲಗೆರೆ ಗ್ರಾಮದ ಕೃಷ್ಣಪ್ಪ ಬಂಧಿತ ಆರೋಪಿಗಳು. ಇವರಿಂದ 15 ಸಾವಿರ ರೂ ಮೌಲ್ಯದ 353 ಗ್ರಾಂ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಈ ಸಂಬಂಧ ಪೂರ್ವ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕಾರ್ಯಾಚರಣೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನೂಪ್ ಎ ಶೆಟ್ಟಿ, ಸಹಾಯಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ಹಾಗೂ ನಗರವೃತ್ತ ನಿರೀಕ್ಷಕ ಗೋವಿಂದರಾಜು ಮಾರ್ಗದರ್ಶನದಲ್ಲಿ ನಗರ ಪೊಲೀಸ್ ಠಾಣೆಯ ಪಿ.ಎಸ್.ಐ.ಪ್ರಕಾಶ್ ,ಸಿಬ್ಬಂದಿಗಳಾದ ಕವಣ್ಣಪ್ಪ, ಕರಿಯಪ್ಪ ದಾಳಿ ನಡೆಸಿದ್ದಾರೆ.