ರಾಮನಗರ:ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಪೊಲೀಸ್ ಕಾನ್ಸ್ಟೇಬಲ್ವೊಬ್ಬರುಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಬಿಡದಿಯ ಬೈರಮಂಗಲ ಕ್ರಾಸ್ ಬಳಿ ನಡೆದಿದೆ. ತಾಲೂಕಿನ ತಿಮ್ಮೇಗೌಡನದೊಡ್ಡಿ ಗ್ರಾಮದ ಚಂದ್ರಶೇಖರ್ ಮೃತ ಪೊಲೀಸ್ ಸಿಬ್ಬಂದಿಯಾಗಿದ್ದು, ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿಕಾರ್ಯ ನಿರ್ವಹಿಸುತ್ತಿದ್ದರು.
ಅಪಘಾತದಲ್ಲಿ ಪೊಲೀಸ್ ಕಾನ್ಸ್ಟೇಬಲ್ ಸಾವು; ವಿವಾಹ ವಾರ್ಷಿಕೋತ್ಸವ ಮುನ್ನಾದಿನವೇ ದುರಂತ - Ramanagara road accident
ಪೊಲೀಸ್ ಕಾನ್ಸ್ಟೇಬಲ್ವೋರ್ವ ತಮ್ಮ ವಿವಾಹ ವಾರ್ಷಿಕೋತ್ಸವ ಮುನ್ನಾದಿನವೇ ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ನಡೆದಿದೆ. ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಅವರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಬಿಡದಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿದೆ.
Police officer death in road accident
ಕಗ್ಗಲೀಪುರದಿಂದ ಬೈಕ್ನಲ್ಲಿ ರಾಮನಗರಕ್ಕೆ ವಾಪಸ್ ಆಗುವ ವೇಳೆ ಅಪರಿಚಿತ ವಾಹನ ಡಿಕ್ಕಿಯಾಯಾಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ಚಂದ್ರಶೇಖರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಂದು ಸೋಮವಾರ ಚಂದ್ರಶೇಖರ್ ಅವರ ವಿವಾಹ ವಾರ್ಷಿಕೋತ್ಸವ ಇತ್ತು. ಇದರ ಮುನ್ನಾದಿನವೇ ವಿಧಿ ಅವರ ಬಾಳಲ್ಲಿ ಆಟವಾಡಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಬಿಡದಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.