ಕರ್ನಾಟಕ

karnataka

ETV Bharat / state

ಕುಡಿಯುವ ನೀರಿನ ಸಮಸ್ಯೆ ಇರುವ ಸ್ಥಳಗಳನ್ನು ಗುರುತಿಸಿ ಮುನ್ನೆಚ್ಚರಿಕಾ ಕ್ರಮವಹಿಸಿ: ರಾಮನಗರ ಡಿಸಿ - Ramanagar DC

ಬರಪೀಡಿತ ಪ್ರದೇಶವೆಂದು ಘೋಷಣೆಯಾದರೆ ಅಂತಹ ಪ್ರದೇಶಗಳಲ್ಲಿ ಟ್ಯಾಂಕರ್‌ಗಳಿಂದ ನೀರು ಹಾಗೂ ಖಾಸಗಿ ಬೋರ್‌ವೆಲ್‌ಗಳಿಂದ ನೀರು ಪಡೆಯಲು ಅವಕಾಶವಿರುತ್ತದೆ. ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳೋಂದಿಗೆ ತಹಶೀಲ್ದಾರ್​ರು ಸಮನ್ವಯ ಸಾಧಿಸಿ ಸಮಸ್ಯೆ ಇರುವ ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದಲ್ಲಿ ಪರಿಹರಿಸುವಂತೆ ಜಿಲ್ಲಾಧಿಕಾರಿ ಡಾ.ರಾಕೇಶ್ ಕುಮಾರ್. ಕೆ ತಿಳಿಸಿದರು.

Ramanagar
ಜಿಲ್ಲಾಜಿಲ್ಲಾಧಿಕಾರಿಗಳ ಸಭೆ ಧಿಕಾರಿಗಳ ಸಭೆ

By

Published : Mar 6, 2021, 7:21 AM IST

ರಾಮನಗರ: ಬೇಸಿಗೆ ಸಮೀಪಿಸುತ್ತಿದ್ದು, ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವ ಸ್ಥಳಗಳನ್ನು ಗುರುತಿಸಿ ಮುನ್ನೆಚ್ಚರಿಕಾ ಕ್ರಮವಹಿಸಿ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ.ರಾಕೇಶ್ ಕುಮಾರ್. ಕೆ ತಿಳಿಸಿದರು.

ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಂದಾಯ ಇಲಾಖೆಗಳ ಸಭೆ ನಡೆಸಿ ಅವರು ಮಾತನಾಡಿದರು. ಬರಪೀಡಿತ ಪ್ರದೇಶವೆಂದು ಘೋಷಣೆಯಾದರೆ ಅಂತಹ ಪ್ರದೇಶಗಳಲ್ಲಿ ಟ್ಯಾಂಕರ್‌ಗಳಿಂದ ನೀರು ಹಾಗೂ ಖಾಸಗಿ ಬೋರ್‌ವೆಲ್‌ಗಳಿಂದ ನೀರು ಪಡೆಯಲು ಅವಕಾಶವಿರುತ್ತದೆ. ತಾಲೂಕು ಮಟ್ಟದಲ್ಲಿ ಟಾಸ್ಕ್ ಫೋರ್ಸ್ ಸಮಿತಿ ಸಭೆ ನಡೆಸಿ, ಗ್ರಾಮ ಪಂಚಾಯತ್​ಗಳಲ್ಲಿ 15ನೇ ಹಣಕಾಸು ಯೋಜನೆಯಡಿ ಅನುದಾನ ಲಭ್ಯವಿದ್ದು, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳೋಂದಿಗೆ ತಹಶೀಲ್ದಾರ್​ರು ಸಮನ್ವಯ ಸಾಧಿಸಿ ಸಮಸ್ಯೆ ಇರುವ ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದಲ್ಲಿ ಪರಿಹರಿಸುವಂತೆ ತಿಳಿಸಿದರು.

ಜಿಲ್ಲೆಯಲ್ಲಿ ಮಳೆ ಹಾಗೂ ಬೆಳೆ ಹಾನಿ ಪ್ರಕರಣಗಳು ಇರುವುದಿಲ್ಲ. ಕನಕಪುರ ತಾಲ್ಲೂಕಿನಲ್ಲಿ ಎರಡು ಜಾನುವಾರು ಹಾನಿ ಪ್ರರಣಗಳಿಗೆ ಪರಿಹಾರ ನೀಡಲಾಗಿದ್ದು, ಬಾಕಿ ಇರುವ ಒಂದು ಪ್ರಕರಣವನ್ನು ಶೀಘ್ರವಾಗಿ ಪರಿಶೀಲಿಸಿ ವಿಲೇವಾರಿ ಮಾಡುವಂತೆ ಅವರು ತಿಳಿಸಿದರು. ಜಿಲ್ಲೆಯಲ್ಲಿ 6,77,365 ಪ್ಲಾಟ್‌ಗಳಿದ್ದು ಈವರೆಗೆ 2,93,183 ಫ್ರೂಟ್ಸ್​ಗೆ ಸೇರಿಸಿ ಶೇ. 43.28 ಸಾಧನೆಯಾಗಿರುತ್ತದೆ. ರೈತರಿಗೆ ಸರ್ಕಾರದ ವತಿಯಿಂದ ನೀಡಲಾಗುವ ವಿವಿಧ ಸೌಲಭ್ಯಗಳನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ಬೆಳೆಗಳ ವಿವರವನ್ನು ದಾಖಲಿಸಬೇಕಿರುತ್ತದೆ. ವಿವಿಧ ಸರ್ವೆ ನಂಬರ್‌ಗಳಲ್ಲಿ ಒಬ್ಬರೇ ರೈತರ ಜಮೀನು ಇರುತ್ತದೆ. ಇವುಗಳನ್ನು ಪರಿಶೀಲಿಸಿ ಆಧಾರ್ ಸಂಖ್ಯೆಯೊಂದಿಗೆ ತಂತ್ರಾಂಶದಲ್ಲಿ ಅಳವಡಿಸುವ ಕೆಲಸ ಬಾಕಿ ಇರುತ್ತದೆ. ಇದನ್ನು ಪೂರ್ಣ ಗೊಳಿಸಲು ತೋಟಗಾರಿಕೆ, ಕೃಷಿ ಹಾಗೂ ಕಂದಾಯ ಇಲಾಖೆಯವರಿಗೆ ಕೆಲಸವ ಹಂಚಿಕೆ ಮಾಡಿ ಮುಂದಿನ ಸಭೆಗೆ ಪ್ರತ್ಯೇಕವಾಗಿ ಇಲಾಖೆಯ ಪ್ರಗತಿಯ ವಿವರ ಸಲ್ಲಿಸಿ ಎಂದರು.

ಸಕಾಲ ಹಾಗೂ ಭೂಮಿ ಪ್ರಕರಣದ ವಿಷಯಗಳು ನಿಗದಿತ ವಿಲೇವಾರಿಯಾಗಬೇಕು. ಪ್ರತಿ ದಿನ ತಹಶೀಲ್ದಾರ್ ಈ ಬಗ್ಗೆ ಅರ್ಧ ಗಂಟೆ ಪರಿಶೀಲಿಸಿ ಯಾರ ಲಾಗಿನ್​ನಲ್ಲಿ ಬಾಕಿ ಇದೆ ಎಂದು ತಿಳಿದುಕೊಂಡು ವಿಲೇವಾರಿ ಮಾಡಬೇಕು. ಸೈನಿಕರು ಹಾಗೂ ಮಾಜಿ ಸೈನಿಕರಿಗೆ ಸಂಬಂಧಿಸಿದಂತೆ ಯಾವುದೇ ಅರ್ಜಿ ಬಂದಲ್ಲಿ ಅದನ್ನು ಪ್ರತ್ಯೇಕವಾಗಿ ವಿಶೇಷ ಕಾಳಜಿಯೊಂದಿಗೆ ನಿರ್ವಹಿಸಬೇಕು ಎಂದು ಸೂಚಿಸಿದರು.

ರಾಮನಗರ ಜಿಲ್ಲೆಯಲಿರುವ 823 ಗ್ರಾಮಗಳಲ್ಲಿ 129 ಗ್ರಾಮಗಳಲ್ಲಿ ರುದ್ರಭೂಮಿ ಇರುವುದಿಲ್ಲ. ಸ್ಮಶಾನ ಇಲ್ಲದ ಗ್ರಾಮಗಳಲ್ಲಿ ಸರ್ಕಾರಿ ಜಮೀನು ಲಭ್ಯವಿರುವ ಕಡೆ ಕಾಮಗಾರಿ ಪ್ರಾರಂಭಿಸಿ ಇಲ್ಲದಿರುವ ಕಡೆ ಖಾಸಗಿಯವರಿಂದ ಖರೀದಿಸಲು ಕ್ರಮ ವಹಿಸುವಂತೆ ತಿಳಿಸಿದರು.

ಸಾಮಾಜಿಕ ಪಿಂಚಣಿ ಹಾಗೂ ಪೌತಿ ಖಾತೆಗೆ ಸಂಬಂಧಿಸಿದಂತೆ ತಹಶೀಲ್ದಾರ್ ವಾರಕೊಮ್ಮ ಒಂದು ಗ್ರಾಮಕ್ಕೆ ಭೇಟಿ ನೀಡಬೇಕು ಹಾಗೂ ಗ್ರಾಮಸ್ಥರ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ABOUT THE AUTHOR

...view details