ಕರ್ನಾಟಕ

karnataka

ETV Bharat / state

ರಾಮನಗರ: ಚನ್ನಪಟ್ಟಣಕ್ಕೆ ಇಂದು ಪ್ರಧಾನಿ ಮೋದಿ ಆಗಮನ - Modi will arrive in Channapatna tomorrow

ಭಾನುವಾರ ಬೊಂಬೆನಗರಿ ಚನ್ನಪಟ್ಟಣಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿ ಸಿ ಪಿ ಯೋಗೇಶ್ವರ್​ ಪರ ಪ್ರಚಾರ ನಡೆಸಲಿದ್ದಾರೆ.

prime-minister-modi-will-arrive-in-channapatna
ರಾಮನಗರ: ಚನ್ನಪಟ್ಟಣಕ್ಕೆ ನಾಳೆ ಪ್ರಧಾನಿ ಮೋದಿ ಆಗಮನ

By

Published : Apr 30, 2023, 12:02 AM IST

ರಾಮನಗರ: ಚನ್ನಪಟ್ಟಣಕ್ಕೆ ನಾಳೆ ಪ್ರಧಾನಿ ಮೋದಿ ಆಗಮನ

ರಾಮನಗರ:ಬೊಂಬೆನಗರಿ ಚನ್ನಪಟ್ಟಣದಲ್ಲಿ ಚುನಾವಣಾ ಕಣ ರಂಗೇರುತ್ತಿದೆ. ಈ ಬಾರಿ ಹೆಚ್​​ ಡಿ ಕುಮಾರಸ್ವಾಮಿಯನ್ನು ಹೇಗಾದರೂ ಮಾಡಿ ಸೋಲಿಸಬೇಕು ಎಂದು ಮಾಜಿ ಸಚಿವ ಸಿ ಪಿ ಯೋಗೇಶ್ವರ್​ ಪಣ ತೊಟ್ಟಿದ್ದಾರೆ. ಹೀಗಾಗಿ ಇಂದು ಏ. 30ಕ್ಕೆ ಚನ್ನಪಟ್ಟಣಕ್ಕೆ ಪ್ರಧಾನಿ ಮೋದಿ ಆಗಮಿಸಲಿ ಸಿ ಪಿ ಯೋಗೇಶ್ವರ್​ ಪರ ಭರ್ಜರಿ ಪರ ಪ್ರಚಾರ ನಡೆಸಲಿದ್ದಾರೆ.

ಮತ್ತೀಕೆರೆ ಗ್ರಾಮದ ಬಳಿ ಬೃಹತ್ ವೇದಿಕೆ ಸಜ್ಜು:ಚನ್ನಪಟ್ಟಣ ತಾಲೂಕಿನ ಮತ್ತಿಕೆರೆ ಗ್ರಾಮದ ಬಳಿ 30 ಎಕರೆಯಲ್ಲಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದೆ. ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲಲು ಪ್ಲಾನ್ ಮಾಡಿದ್ದು, ಈ ಹಿನ್ನೆಲೆ ಚನ್ನಪಟ್ಟಣದಲ್ಲಿ ಬೃಹತ್ ಸಮಾವೇಶ ಆಯೋಜನೆ ಮಾಡಲಾಗಿದೆ, ಈ ವೇದಿಕೆಯಲ್ಲಿ ಸುಮಾರು 10 ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರು ಭಾಗಿಯಾಗಲಿದ್ದಾರೆ.

ಮಂಡ್ಯ ಹಾಗೂ ರಾಮನಗರ ಜಿಲ್ಲೆಗಳು ಒಳಗೊಂಡಂತೆ ಸಮಾವೇಶ ಮಾಡಲಾಗುತ್ತಿದೆ. ಸುಮಾರು 1 ಲಕ್ಷಕ್ಕೂ ಅಧಿಕ ಕಾರ್ಯಕರ್ತರು ಭಾಗಿಯಾಗುವ ನಿರೀಕ್ಷೆ ಇದೆ. ಪ್ರಧಾನಿ ನರೇಂದ್ರ ಮೋದಿ ಕೋಲಾರದಲ್ಲಿ ಸಮಾವೇಶ ಮುಗಿಸಿ ಇಂದು ಸುಮಾರು ಮಧ್ಯಾಹ್ನ 12. 30ಕ್ಕೆ ಚನ್ನಪಟ್ಟಣಕ್ಕೆ ಆಗಮಿಸಲಿದ್ದಾರೆ.

ಈ ಬಗ್ಗೆ ಮಾಜಿ ಸಚಿವ ಸಿ ಪಿ ಯೋಗೇಶ್ವರ್ ಮಾತನಾಡಿ, ಚನ್ನಪಟ್ಟಣದಲ್ಲಿ ಸಮಾವೇಶಕ್ಕೆ ಅವಕಾಶ ಕೊಟ್ಟಿದ್ದು ಖುಷಿ ತಂದಿದೆ. ರಾಮನಗರ ರಾಜಕೀಯ ಇತಿಹಾಸದಲ್ಲಿ ಇದೊಂದು ಅದ್ಭುತ ಕಾರ್ಯಕ್ರಮ ಆಗಲಿದೆ. ಇದೇ ಪ್ರಥಮ ಭಾರಿ ಪ್ರಧಾನಿಯೊಬ್ಬರು ನಮ್ಮ ಕ್ಷೇತ್ರಕ್ಕೆ ಬರುತ್ತಿರುವುದು ಸಂತಸ ತಂದಿದೆ. ಮೋದಿ ಆಗಮನದಿಂದ ಪಕ್ಷಕ್ಕೆ ಮತ್ತಷ್ಟು ಬಲ ಬರಲಿದೆ ಎಂದು ಹೇಳಿದರು.

ಮೋದಿಗೆ ಅಂಬೆಗಾಲು ಕೃಷ್ಣ ಉಡುಗೊರೆ:ಭಾನುವಾರಚನ್ನಪಟ್ಟಣದಲ್ಲಿ ಪ್ರಧಾನಿ ಮೋದಿ ಹವಾ ಇರಲಿದ್ದು, ಮಾಜಿ ಸಚಿವ, ಬಿಜೆಪಿ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಪರವಾಗಿ ಚುನಾವಣಾ ಪ್ರಚಾರಕ್ಕಾಗಿ ಆಗಮಿಸಲಿದ್ದಾರೆ. ಈ ವೇಳೆ ಪ್ರಧಾನಿಗೆ ಚನ್ನಪಟ್ಟಣದ ವಿಶ್ವಪ್ರಸಿದ್ಧ ಶ್ರೀ ಅಂಬೆಗಾಲು ಕೃಷ್ಣನ ಉಡುಗೊರೆ ನೀಡಲು ಸಿದ್ದತೆ ಮಾಡಲಾಗಿದ್ದು, ಸುಮಾರು 5.30 ಕೆಜಿ ತೂಕದ ಪಂಚಲೋಹದ ವಿಗ್ರಹವನ್ನು ಪ್ರಧಾನಿಗೆ ಉಡುಗೊರೆಯಾಗಿ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ನೀಡಲಿದ್ದಾರೆ ಎಂದು ತಿಳಿದುಬಂದಿದೆ.

ಬಿಗಿ ಭದ್ರತೆಯಲ್ಲಿ ಕಾರ್ಯಕ್ರಮ ಆಯೋಜನೆ:ಜೆಡಿಎಸ್ ಭದ್ರಕೋಟೆಗೆ ಪ್ರಧಾನಿ ನರೇಂದ್ರ ಮೋದಿ ಕಮಲ ಅರಳಿಸಲು ಆಗಮಿಸುತ್ತಿದ್ದಾರೆ. ಇದೇ ಮೊದಲ ಬಾರಿಗೆ ಜಿಲ್ಲೆಗೆ ಮೋದಿ ಆಗಮಿಸುತ್ತಿದ್ದು, ಚನ್ನಪಟ್ಟಣ ತಾಲೂಕಿನ ಶೆಟ್ಟಿಹಳ್ಳಿ ಬಳಿ ಬೃಹತ್ ಸಮಾವೇಶ ಆಯೋಜಿಸಿ
ಹಳೆ ಮೈಸೂರು ಭಾಗದಲ್ಲಿ ಹೆಚ್ಚಿನ ಸ್ಥಾನ ಗೆಲ್ಲಲು ಬಿಜೆಪಿ ಪ್ಲಾನ್ ನಡೆಸಿದೆ. ಮೋದಿ ಕಾರ್ಯಕ್ರಮಕ್ಕೆ ಸಕಲ ಸಿದ್ದತೆ ಮಾಡಿಕೊಂಡಿರೋ ಬಿಜೆಪಿ ಇಂದು ಮಧ್ಯಾಹ್ನ 1 ಗಂಟೆಗೆ ಬೃಹತ್ ಸಮಾವೇಶ ಕಾರ್ಯಕ್ರಮದಲ್ಲಿ ರಾಮನಗರ, ಮಂಡ್ಯ, ತುಮಕೂರು ಜಿಲ್ಲೆಯ 12 ವಿಧಾನಸಭಾ ಕ್ಷೇತ್ರಗಳ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರನ್ನು ಉದ್ದೇಶಿಸಿ ಪ್ರಧಾನಿ ಮಾತನಾಡಲಿದ್ದಾರೆ.

ಈ ಕಾರ್ಯಕ್ರಮಕ್ಕೆ ಸೂಕ್ತ ಪೊಲೀಸ್​ ಬಂದೋಬಸ್ತ್ ಕಲ್ಪಿಸಲಾಗಿದ್ದು, ಸುಮಾರು 1 ಸಾವಿರಕ್ಕೂ ಹೆಚ್ಚು ಪೊಲೀಸರು ನಿಯೋಜನೆ ಮಾಡಲಾಗಿದೆ. ಶ್ವಾನದಳ, ಬಾಂಬ್ ನಿಷ್ಕ್ರಿಯ ದಳದಿಂದ ತಪಾಸಣೆ ಮಾಡಲಾಗಿದೆ.

ಇದನ್ನೂ ಓದಿ:ಭಾನುವಾರ ಕೋಲಾರದಲ್ಲಿ ಪ್ರಧಾನಿ ಮೋದಿ ಬೃಹತ್​ ಸಮಾವೇಶ, ಮೈಸೂರಲ್ಲಿ ಮೆಗಾ ರೋಡ್​​ ಶೋ

ABOUT THE AUTHOR

...view details