ಕರ್ನಾಟಕ

karnataka

By

Published : May 4, 2020, 9:17 AM IST

ETV Bharat / state

ರಾಮನಗರ ಜಿಲ್ಲೆಯಾದ್ಯಂತ ಮೇ 17ರವರಗೆ ನಿಷೇಧಾಜ್ಞೆ ಜಾರಿ..

ಯಾವುದೇ ವ್ಯಕ್ತಿ ಈ ಆದೇಶ ಉಲ್ಲಂಘಿಸಿದಲ್ಲಿ ಅಂತವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ 51 ರಿಂದ 60ರ ಜೊತೆಗೆ ಭಾರತೀಯ ದಂಡ ಸಂಹಿತೆಯು ಕಲಂ 188ರ ರೀತ್ಯಾ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು

Prohibition issued on May 17 across Ramanagar district
ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ

ರಾಮನಗರ: ಕೊರೊನಾ ವೈರಸ್ ಸೋಂಕು ಹರಡದಂತೆ ತಡೆಯಲು ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಸಿಆರ್‌ಪಿಸಿ 1973ರ ಕಲಂ 144(1)ರ ಅಡಿ ಜಿಲ್ಲೆಯಾದ್ಯಂತ ಮೇ 17ರ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಎಂ ಎಸ್‌ ಅರ್ಚನಾ ಅವರು ಆದೇಶಿಸಿದ್ದಾರೆ.

ನಿಷೇಧಾಜ್ಞೆಯ ಅವಧಿಯಲ್ಲಿ ಬೆಳಗ್ಗೆ 7 ಗಂಟೆಯಿಂದ ರಾತ್ರಿ 7 ಗಂಟೆಯವರೆಗೆ ಅಗತ್ಯ ಸೇವೆ ಹೊರತುಪಡಿಸಿ ಸಾರ್ವಜನಿಕರ ಅನಗತ್ಯ ಓಡಾಟ ಕಡ್ಡಾಯವಾಗಿ ನಿಷೇಧಿಸಲಾಗಿದೆ. ಎಪಿಎಂಸಿ ಮಾವು ಮಾರುಕಟ್ಟೆ ಮತ್ತು ರೇಷ್ಮೆ ಮಾರುಕಟ್ಟೆಗಳಿಗೆ ವಿನಾಯಿತಿ ನೀಡಲಾಗಿದೆ ಎಂದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ವಿನಾಯಿತಿ ನೀಡಲಾಗಿರುವ ಸೇವೆಗಳಿಗೆ ಸಂಬಂಧಿಸಿದಂತೆ ಸಂಬಂಧಪಟ್ಟ ಸಂಸ್ಥೆಗಳು ಹಾಗೂ ಸಿಬ್ಬಂದಿ ಕೋವಿಡ್-19 ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು. ಯಾವುದೇ ವ್ಯಕ್ತಿ ಈ ಆದೇಶ ಉಲ್ಲಂಘಿಸಿದಲ್ಲಿ ಅಂತವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ 51 ರಿಂದ 60ರ ಜೊತೆಗೆ ಭಾರತೀಯ ದಂಡ ಸಂಹಿತೆಯು ಕಲಂ 188ರ ರೀತ್ಯಾ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ABOUT THE AUTHOR

...view details