ರಾಮನಗರ: ಮುಂಬೈ ಪೊಲೀಸರು ಡಿ.ಕೆ.ಶಿವಕುಮಾರ್ ಅವರನ್ನು ವಶಕ್ಕೆ ಪಡೆದಿರುವುದನ್ನು ವಿರೋಧಿಸಿ ರಾಮನಗರ ಮತ್ತು ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಡಿಕೆಶಿಯನ್ನು ವಶಕ್ಕೆ ಪಡೆದ ಮುಂಬೈ ಪೊಲೀಸರ ನಡೆ ಖಂಡಿಸಿ ರಾಮನಗರದಲ್ಲಿ ಪ್ರತಿಭಟನೆ - ರಾಮನಗರ
ಮುಂಬೈ ಪೊಲೀಸರು ಡಿ.ಕೆ.ಶಿವಕುಮಾರ್ ಅವರನ್ನು ವಶಕ್ಕೆ ಪಡೆದಿರುವುದನ್ನು ವಿರೋಧಿಸಿ ರಾಮನಗರ ಮತ್ತು ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ರಸ್ತೆ ತಡೆಯಲಾಗಿದ್ದು, ಕೆಲಕಾಲ ಸಂಚಾರ ಅಸ್ತವ್ಯಸ್ತವಅಗಿತ್ತು.
ಡಿಕೆಶಿ ವಶಕ್ಕೆ ಪಡೆದ ಹಿನ್ನೆಲೆ ರಾಮನಗರದಲ್ಲಿ ಪ್ರತಿಭಟನೆ
ಬೆಂಗಳೂರು-ಮೈಸೂರು ಹೆದ್ದಾರಿ ತಡೆದ ಪ್ರತಿಭಟನಾಕಾರರು, ಡಿ.ಕೆ.ಶಿವಕುಮಾರ್ ಬಂಧನ ಸಂವಿಧಾನದ ಆಶಯಗಳ ವಿರುದ್ಧವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ಡಿಕೆಶಿ ಹಾಗೂ ಕುಮಾರಸ್ವಾಮಿ ಪರ ಜೈಕಾರ ಕೂಗಿದ ಕಾರ್ಯಕರ್ತರು, ಮಹಾರಾಷ್ಟ್ರ ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ, ರಾಜ್ಯ ಬಿಜೆಪಿ ನಾಯಕರ ವಿರುದ್ಧ ಕೂಡ ಆಕ್ರೋಶ ಹೊರಹಾಕಿದರು.