ರಾಮನಗರ: ನಗರದ ಉಪ ನೋಂದಣಿ ಕಚೇರಿಯಲ್ಲಿ ಪ್ರಾಯೋಗಿಕವಾಗಿ ಜಾರಿಯಾಗಿದ್ದ ಪೈಲೆಟ್ ಪ್ರಾಜೆಕ್ಟ್ ಆನ್ಲೈನ್ ಸಮಸ್ಯೆಯಿಂದ ಆಕ್ರೋಶಗೊಂಡ ಸಾರ್ವಜನಿಕರು ದಿಢೀರ್ ಪ್ರತಿಭಟನೆ ನಡೆಸಿದರು.
ಸರ್ಕಾರಕ್ಕೆ ಹೆಚ್ಚಿನ ಆದಾಯಗಳಿರುವ ಕಚೇರಿಗಳಲ್ಲಿ ಉಪ ನೋಂದಣಿ ಕಚೇರಿಗಳಿವೆ. ಇ-ಆಡಳಿತದ ಭಾಗವಾಗಿ ಹಾಗೂ ಪಾರದರ್ಶಕ ವ್ಯವಸ್ಥೆ ತರುವ ನಿಟ್ಟಿನಲ್ಲಿ ಪ್ರಾಯೋಗಿಕವಾಗಿ ಜಾರಿಗೆ ತಂದಿರುವ ಆನ್ಲೈನ್ ವ್ಯವಸ್ಥೆಯಲ್ಲಿ ಲೋಷದೋಷಗಳು ಕಂಡು ಬಂದಿದೆ. ಇದನ್ನು ಬಂಡವಾಳ ಮಾಡಿಕೊಂಡು, ಸಿಬ್ಬಂದಿ ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದರು.