ಕರ್ನಾಟಕ

karnataka

ETV Bharat / state

ರಾಮನಗರ: ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಖಾಸಗಿ ಶಾಲಾ ಶಿಕ್ಷಕರ ಪ್ರತಿಭಟನೆ - ಖಾಸಗಿ ಶಾಲಾ ಶಿಕ್ಷಕರಿಂದ ಪ್ರತಿಭಟನೆ

ಸರ್ಕಾರ ಖಾಸಗಿ ಶಾಲಾ ಶಿಕ್ಷಕರಿಗೆ ವಿಮಾ ಸೌಲಭ್ಯ ಒದಗಿಸಬೇಕು. ಆರ್.ಟಿ .ಇ ಹಣ ಬಿಡುಗಡೆ ಮಾಡಬೇಕು, ಕೊರೊನಾ ಸಂಕಷ್ಟದಲ್ಲಿರುವ ಶಾಲಾ ಶಿಕ್ಷಕರಿಗೆ ವಿಶೇಷ ಪ್ಯಾಕೇಜ್ ನೀಡಬೇಕೆಂದು ಶಿಕ್ಷಕರು ಒತ್ತಾಯಿಸಿದ್ದಾರೆ.

protest-by-private-school-teachers-demanding-fulfillment-of-various-demands
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಖಾಸಗಿ ಶಾಲಾ ಶಿಕ್ಷಕರಿಂದ ಪ್ರತಿಭಟನೆ

By

Published : Jul 13, 2020, 7:35 PM IST

ರಾಮನಗರ: ಖಾಸಗಿ ಶಾಲಾ ಶಿಕ್ಷಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಗರದ ಶಾಂತಿನಿಕೇತನ ಕಾಲೇಜಿನ ಎಸ್.ಎಸ್.ಎಲ್.ಸಿ ಮೌಲ್ಯಮಾಪನ ಕೇಂದ್ರದ ಮುಂಭಾಗ ಸಮಾವೇಶಗೊಂಡ ಶಿಕ್ಷಕರು ಸರ್ಕಾರದ ವಿರುದ್ಧ ಪ್ರತಿಭಟಿಸಿದ್ದಾರೆ.

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಖಾಸಗಿ ಶಾಲಾ ಶಿಕ್ಷಕರಿಂದ ಪ್ರತಿಭಟನೆ

ಸರ್ಕಾರ ಖಾಸಗಿ ಶಾಲಾ ಶಿಕ್ಷಕರಿಗೆ ವಿಮಾ ಸೌಲಭ್ಯ ಒದಗಿಸಬೇಕು. ಆರ್.ಟಿ.ಇ ಹಣ ಬಿಡುಗಡೆ ಮಾಡಬೇಕು, ಕೊರೊನಾ ಸಂಕಷ್ಟದಲ್ಲಿರುವ ಖಾಸಗಿ ಶಾಲಾ ಶಿಕ್ಷಕರಿಗೆ ವಿಶೇಷ ಪ್ಯಾಕೇಜ್ ನೀಡಬೇಕೆಂಬ ಆಗ್ರಹದೊಂದಿಗೆ ಶಿಕ್ಷಕರ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಆಗ್ರಹಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಮನವಿ ಸಲ್ಲಿಸಿದರು.

ನಂತರ ಎಸ್​ಎಸ್​ಎಲ್​ಸಿ ಮೌಲ್ಯಮಾಪನಕ್ಕೆ ತೆರಳಿದ ಶಿಕ್ಷಕರು, ಮಕ್ಕಳ ಭವಿಷ್ಯದ ದೃಷ್ಠಿಯಿಂದ ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಭಾಗವಹಿಸುತ್ತಿದ್ದೇವೆ. ಸರ್ಕಾರ ನಮ್ಮ ಬೇಡಿಕೆ ಈಡೇರಿಸದಿದ್ದರೆ ಮೌಲ್ಯಮಾಪನದ ವೇಳೆ ನೀಡುವ ವೇತನ ಕೂಡ ಪಡೆಯುವುದಿಲ್ಲ ಎಂದು ಎಚ್ಚರಿಸಿದ್ದಾರೆ.

ABOUT THE AUTHOR

...view details