ರಾಮನಗರ:ಶಾಲಾ ಪಠ್ಯ ಪುಸ್ತಕದಲ್ಲಿ ಟಿಪ್ಪುಸುಲ್ತಾನ್‌ನ ಪಠ್ಯ ಕೈ ಬಿಡದಂತೆ ಹಾಗೂ ಟಿಪ್ಪು ಜಯಂತಿ ರದ್ದು ಮಾಡಿರುವುದನ್ನು ವಿರೋಧಿಸಿ ರಾಮನಗರದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು.
ಟಿಪ್ಪು ಜಯಂತಿ ರದ್ದು ವಿರೋಧಿಸಿ ರಾಮನಗರದಲ್ಲಿ ಪ್ರತಿಭಟನೆ - Protest in Ramanagara against Tipu Jayanthi's cancellation update
ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಮೈಸೂರು ಹುಲಿ ಹಜರತ್ ಟಿಪ್ಪು ಸುಲ್ತಾನ್ ಹೋರಾಟ ಸಮಿತಿಯ ಕಾರ್ಯಕರ್ತರು ಟಿಪ್ಪು ಜಯಂತಿ ರದ್ದು ವಿರೋಧಿಸಿ ರಾಮನಗರದಲ್ಲಿ ಪ್ರತಿಭಟನೆ ನಡೆಸಿದರು.
ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಮೈಸೂರು ಹುಲಿ ಹಜರತ್ ಟಿಪ್ಪು ಸುಲ್ತಾನ್ ಹೋರಾಟ ಸಮಿತಿಯ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ನಗರದ ರೈಲ್ವೆ ನಿಲ್ದಾಣದಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಕಾರರು ಜಿಲ್ಲಾಧಿಕಾರಿ ಕಚೇರಿ ಎದುರು ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಅಲ್ಲದೇ ಟಿಪ್ಪು ಸುಲ್ತಾನ್ ಸಾಧನೆಗಳನ್ನು ಒಳಗೊಂಡಿರುವ ಪಠ್ಯವನ್ನು ಶಾಲಾ ಪಠ್ಯಕ್ರಮದಿಂದ ಕೈ ಬಿಡುವುದನ್ನ ವಿರೋಧಿಸಿದರು. ಅಲ್ಲದೇ ಟಿಪ್ಪು ಜಯಂತಿ ರದ್ದು ಮಾಡಿರುವುದನ್ನು ವಾಪಾಸ್ಸು ಪಡೆದು ಟಿಪ್ಪು ಜಯಂತಿ ಆಚರಣೆ ಮಾಡುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಮುಖಾಂತರ ಸರ್ಕಾರವನ್ನು ಒತ್ತಾಯಿಸಿದರು.
TAGGED:
ಕರ್ನಾಟಕ ಪ್ರಾಂತ ರೈತ ಸಂಘ