ಕರ್ನಾಟಕ

karnataka

ETV Bharat / state

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಿಎಂ ಕ್ಷೇತ್ರದ ರೈತರಿಂದ ಪ್ರತಿಭಟನೆ - undefined

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ರಾಮನಗರ ಜಿಲ್ಲೆಯ ರೈತ ಸಂಘದ ಕಾರ್ಯಕರ್ತರು ಸಿಎಂ ಕುಮಾರಸ್ವಾಮಿ ಅವರ ಸ್ವಕ್ಷೇತ್ರ ಚನ್ನಪಟ್ಟಣದಲ್ಲಿನ ಗಾಂಧಿ ಭವನದಿಂದ ತಾಲೂಕು ಕಚೇರಿಯವರೆಗೆ ರ್ಯಾಲಿ ನಡೆಸಿದರು.

ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ,ರೈತ ಸಂಘದ ಕಾರ್ಯಕರ್ತರಿಂದ ಪ್ರತಿಭಟನೆ

By

Published : Jun 4, 2019, 5:48 AM IST

ರಾಮನಗರ:ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜಿಲ್ಲೆಯ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ,ರೈತ ಸಂಘದ ಕಾರ್ಯಕರ್ತರಿಂದ ಪ್ರತಿಭಟನೆ

ಸಿಎಂ ಕುಮಾರಸ್ವಾಮಿ ಅವರ ಸ್ವಕ್ಷೇತ್ರ ಚನ್ನಪಟ್ಟಣದಲ್ಲಿನ ಗಾಂಧಿ ಭವನದಿಂದ ತಾಲೂಕು ಕಚೇರಿಯವರೆಗೆ ಸೋಮವಾರ ಸರ್ಕಾರದ ವೈಫಲ್ಯ ಖಂಡಿಸಿ, ರೈತ ಸಂಘದ ಕಾರ್ಯಕರ್ತರು ಎತ್ತಿನಗಾಡಿ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು. ತಾಲೂಕಿನಲ್ಲಿ ಹತ್ತಾರು ಸಮಸ್ಯೆಗಳು ತಲೆದೋರಿದ್ದು, ಇದ್ಯಾವುದಕ್ಕೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಇನ್ನಾದರೂ ಮುಖ್ಯಂತ್ರಿಯವರು ಇತ್ತ ಗಮನ ಹರಿಸಬೇಕು ಎಂದು ಆಗ್ರಹಿಸಿದರು.

ಈಗ ಸಾಂಕೇತಿಕವಾಗಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ಬೇಡಿಕೆ ಈಡೇರದೇ ಇದ್ದಲ್ಲಿ ಉಗ್ರ ಹೋರಾಟ ನಡೆಸುತ್ತೇವೆ ಎಂದು ರೈತರು ಎಚ್ಚರಿಸಿದ್ದಾರೆ.

For All Latest Updates

TAGGED:

ABOUT THE AUTHOR

...view details