ರಾಮನಗರ: ಹೊಟ್ಟೆ ಹಾಗೂ ತಲೆಗೆ ಡ್ರ್ಯಾಗನ್‍ನಿಂದ ಚುಚ್ಚಿ ಕಾಂಗ್ರೆಸ್ ಮುಖಂಡನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ರಾಮನಗರದಲ್ಲಿ ನಡೆದಿದೆ.
ಗಂಟಪ್ಪ ಕೊಲೆಯಾದ ದುರ್ದೈವಿ. ರಾಮನಗರ ಜಿಲ್ಲೆಯ ಬಿಡದಿ ಹೋಬಳಿ ಬಾನಂದೂರು ಗ್ರಾಮದ ನಿವಾಸಿಯಾಗಿರುವ ಇವರನ್ನು ಭೈರವನದೊಡ್ಡಿ ಸಮೀಪ ಇರುವ ಅವರದ್ದೇ ತೋಟದ ಬೈಕ್ ಸರ್ವಿಸ್ ಸ್ಟೇಷನ್ ಮನೆಯಲ್ಲಿ ಕೊಲೆ ಮಾಡಲಾಗಿದೆ.
ಈ ಘಟನೆ ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ಕೊಲೆ ಮಾಡಲಾಗಿದೆ. ಮೃತದೇಹವನ್ನು ಬೆಂಗಳೂರಿನ ರಾಜರಾಜೇಶ್ವರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದ್ದು, ಜಮೀನು ವಿವಾದಕ್ಕೆ ಕೊಲೆ ಮಾಡಿರುವ ಶಂಕೆ ಮೇಲ್ನೋಟಕ್ಕೆ ವ್ಯಕ್ತವಾಗಿದೆ. ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡುವೆ ನಡೆಸಲಾಗುತ್ತಿದೆ.
ಇದನ್ನೂ ಓದಿ:ಕಾಂಗ್ರೆಸ್ ಕಾರ್ಯಕರ್ತನ ಕೊಲೆ ಪ್ರಕರಣ : ಆರೋಪಿ ಕೃಷ್ಣ ಪೊಲೀಸ್ ವಶಕ್ಕೆ