ಕರ್ನಾಟಕ

karnataka

ETV Bharat / state

ಹೆಲ್ಮೆಟ್‌ ಧರಿಸಿ ವಾಹನ ಚಲಾಯಿಸಿ: ರಾಮನಗರ ಪೊಲೀಸರಿಂದ ಜನ ಜಾಗೃತಿ

ರಾಮನಗರದ ಐಜೂರು ಠಾಣೆ ಸರಹದ್ದಿನ ಎಲ್ಲಾ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಹೆಲ್ಮೆಟ್‌ ಕುರಿತು ಸಾರ್ವಜನಿಕರಲ್ಲಿ ಪೊಲೀಸರು ಜಾಗೃತಿ ಮೂಡಿಸಿದರು.

ಹೆಲ್ಮೆಟ್‌ ಜಾಗೃತಿ ಮೂಡಿಸಿದ ರಾಮನಗರ ಪೊಲೀಸರು

By

Published : Aug 18, 2019, 2:52 PM IST

ರಾಮನಗರ:ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್‌ ಧರಿಸಬೇಕು ಎಂದು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮವನ್ನು ನಗರದ ಐಜೂರು ಠಾಣಾ ಪೊಲೀಸರು ಹಮ್ಮಿಕೊಂಡಿದ್ದರು.

ವಾಹನ ಸವಾರರು ವಾಹನಗಳಿಗೆ ಸಂಬಂಧಪಟ್ಟ ದಾಖಲೆಗಳನ್ನು ಸದಾ ಕಡ್ಡಾಯವಾಗಿ ಜತೆಯಲ್ಲಿ ಇಟ್ಟುಕೊಂಡಿರಬೇಕು, ಹೆಲ್ಮೆಟ್‌ ಧರಿಸದೆ ವಾಹನ ಚಲಾಯಿಸಿದರೆ ಸ್ಥಳದಲ್ಲಿಯೇ ದಂಡ ತೆರಬೇಕಾಗುತ್ತದೆ. ಅಲ್ಲದೆ 18 ವರ್ಷದ ಒಳಗಿನವರು ವಾಹನ ಚಲಾಯಿಸುವುದು ಅಪರಾಧ ಎಂದು ನಗರದ ಕೆಂಪೇಗೌಡ ವೃತ್ತದಲ್ಲಿ ಜನರಿಗೆ ಜಾಗೃತಿ ಮೂಡಿಸಿದರು.

ಹೆಲ್ಮೆಟ್‌ ಕುರಿತು ಜಾಗೃತಿ ಮೂಡಿಸಿದ ರಾಮನಗರ ಪೊಲೀಸರು

ಬಳಿಕ ತಮ್ಮ ದ್ವಿಚಕ್ರ ವಾಹನದಲ್ಲಿ ಐಜೂರು ಠಾಣೆ ಸರಹದ್ದಿನ ಎಲ್ಲಾ ಪ್ರಮುಖ ರಸ್ತೆಗಳಲ್ಲಿ ಸಂಚಾರ ಮಾಡಿ, ವಾಹನ ಚಲಾಯಿಸುವಾಗ ಹೆಲ್ಮೆಟ್‌ ಧರಿಸುವುದರಿಂದ ಸಂಭವನೀಯ ಅಪಘಾತಗಳಿಂದ ತಲೆಗೆ ಪೆಟ್ಟಾಗುವುದು ತಪ್ಪುತ್ತದೆ. ಪೊಲೀಸರು ನೀಡುವ ಸೂಚನೆಗಳನ್ನು ಅಗತ್ಯವಾಗಿ ಪಾಲಿಸಬೇಕು. ಆಗಸ್ಟ್ 20 ರಿಂದ ಕಡ್ಡಾಯವಾಗಿ ಸಂಚಾರ ನಿಯಮಗಳನ್ನು ಪಾಲನೆ ಮಾಡದಿದ್ದರೆ, ಒಂದು ಸಾವಿರ ರೂ. ದಂಡ ಕಡ್ಡಾಯವಾಗಿ ಕಟ್ಟಲೇಬೇಕಾಗುತ್ತದೆ. ದಂಡದಿಂದ ತಪ್ಪಿಸಿಕೊಳ್ಳಲು ನಿಯಮಗಳನ್ನ ಪಾಲನೆ ಮಾಡಬೇಕು ಎಂದು ಸಾರ್ವಜನಿಕರಿಗೆ ಸೂಚನೆ ನೀಡಿದರು.

ABOUT THE AUTHOR

...view details