ರಾಮನಗರ:ಕೃಷಿ ಚಟುವಟಿಕೆಗೆ ರಾಜ್ಯದಲ್ಲಿ ಯಾವುದೇ ತೊಂದರೆಯಾಗಬಾರದು. ಈ ಬಗ್ಗೆ ರಾಜ್ಯದ ಸಮಗ್ರ ವರದಿಯನ್ನು ಮುಖ್ಯಮಂತ್ರಿಗಳಿಗೆ ನೀಡುತ್ತೇನೆ. ಜಿಲ್ಲೆಯ ರೈತರಿಗೆ ಮುಂಗಾರು ಬಿತ್ತನೆಗೆ ಯಾವುದೇ ತೊಂದರೆಯಿಲ್ಲ. ಬಿತ್ತನೆ ಬೀಜ, ಗೊಬ್ಬರವನ್ನು ಪೂರೈಕೆ ಮಾಡಲಾಗುತ್ತದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದರು.
ಹೂ ಬೆಳೆಗಾರರು ನಷ್ಟದಲ್ಲಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಧಾರ್ಮಿಕ, ಶುಭ ಕಾರ್ಯಕ್ರಮಗಳು ನಡೆಯದ ಕಾರಣ ಈ ಸಮಸ್ಯೆ ಎದುರಾಗಿದೆ. ರಾಜ್ಯದ ಹೂ ಬೆಳೆಗಾರರ ಸಮೀಕ್ಷೆ ಮಾಡಲಾಗುತ್ತದೆ. ನಂತರ ಅವರಿಗೆ ಸೂಕ್ತ ಪರಿಹಾರ ಕೊಡಲಾಗುತ್ತದೆ ಎಂದರು. ಜೊತೆಗೆ ರೈತರ ಹಣ್ಣು, ತರಕಾರಿ ಖರೀದಿ ಬಗ್ಗೆಯೂ ಚಿಂತಿಸಲಾಗುತ್ತದೆ. ಸಂಬಂಧಪಟ್ಟ ಸಚಿವರ ಗಮನಕ್ಕೆ ಈ ಬಗ್ಗೆ ತಿಳಿಸುತ್ತೇನೆಂದು ಭರವಸೆ ಕೊಟ್ಟರು.