ರಾಮನಗರ: ಜಿಲ್ಲೆಯ ಪೊಲೀಸರ ಮೇಲೆ ರಾಜಕಾರಣಿಗಳ ಒತ್ತಡಕ್ಕೆ ಆಸ್ಪದವಿಲ್ಲವೆಂದು ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿ ಎಸ್.ಗಿರೀಶ್ ಹೇಳಿದರು.
ಪೊಲೀಸರ ಮೇಲೆ ರಾಜಕಾರಣಿಗಳ ಒತ್ತಡಕ್ಕೆ ಆಸ್ಪದವಿಲ್ಲ: ರಾಮನಗರ ನೂತನ ಎಸ್ಪಿ - ರಾಮನಗರ ಲೆಟೆಸ್ಟ್ ನ್ಯೂಸ್
ಅಪರಾಧ ಚಟುವಟಿಕೆಗಳು ಹಾಗೂ ಕಾನೂನು ಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಈಗಾಗಲೇ ನಮ್ಮ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ರಾಜ್ಯ ಸರ್ಕಾರ ಡ್ರಗ್ಸ್ ವಿರುದ್ಧ ಸಮರ ಸಾರಿದ್ದು, ನಮ್ಮಲ್ಲೂ ಕೂಡ ಡ್ರಗ್ಸ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿ ಎಸ್. ಗಿರೀಶ್ ತಿಳಿಸಿದರು.

ನಿನ್ನೆ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಸ್.ಗಿರೀಶ್, ಅಪರಾಧ ಚಟುವಟಿಕೆಗಳು ಹಾಗೂ ಕಾನೂನು ಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಈಗಾಗಲೇ ನಮ್ಮ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ರಾಜ್ಯ ಸರ್ಕಾರ ಡ್ರಗ್ಸ್ ವಿರುದ್ಧ ಸಮರ ಸಾರಿದೆ, ನಮ್ಮಲ್ಲೂ ಕೂಡ ಡ್ರಗ್ಸ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದರು.
ಕೇವಲ ನಮ್ಮ ಜಿಲ್ಲೆಗೆ ಮಾತ್ರ ಸೀಮಿತವಾಗಿರದೆ ಪಕ್ಕದ ಜಿಲ್ಲೆಗಳಲ್ಲೂ ಕೂಡ ಗಾಂಜಾ ಮಾರಾಟ ಮಾಡುತ್ತಿದ್ದವರನ್ನು ವಶಕ್ಕೆ ಪಡೆದು ಅವರಿಂದ ಕೂಡ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಶಾಲಾ-ಕಾಲೇಜುಗಳಲ್ಲಿ ಗಾಂಜಾ ಹಾಗೂ ಡ್ರಗ್ಸ್ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಲಾಗುವುದು ಎಂದರು. ನಾನು ಭ್ರಷ್ಟಾಚಾರ ಸಹಿಸುವುದಿಲ್ಲ, ನನ್ನ ಸೇವಾ ದಿನಗಳಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲ. ನನ್ನ ನಿಷ್ಠುರ ನಡೆಯಿಂದಾಗಿ ಕೆಲವರಿಗೆ ನನ್ನನ್ನ ಕಂಡ್ರೆ ಇಷ್ಟವಾಗುವುದಿಲ್ಲ. ಅದಕ್ಕಾಗಿ ನನ್ನ ವರ್ಗಾವಣೆಗಳಾಗಿವೆ. ಆದ್ರೆ ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯುವುದಿಲ್ಲ ಎಂದು ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಗಿರೀಶ್ ಹೇಳಿದರು.