ಲಿಂಗಸುಗೂರು(ರಾಯಚೂರು):ಕೃಷ್ಣಾ ಪ್ರವಾಹದ ಹಿನ್ನೆಲೆಯಲ್ಲಿ ಮ್ಯಾದರಗಡ್ಡಿ ನಡುಗಡ್ಡೆಯಲ್ಲಿ ಸಿಲುಕಿದವರನ್ನು ರಕ್ಷಣೆ ಮಾಡುವ ಕಾರ್ಯ ಭರದಿಂದ ಸಾಗಿದೆ.
ನಡುಗಡ್ಡೆಯಲ್ಲಿ ಸಿಲುಕಿದವರ ರಕ್ಷಣಾ ಕಾರ್ಯ ಸಹಾಯಕ ಆಯುಕ್ತ ರಾಜಶೇಖರ ಡಂಬಳ, ತಹಶೀಲ್ದಾರ್ ಚಾಮರಾಜ ಪಾಟೀಲ ನೇತೃತ್ವದಲ್ಲಿ ತಾಲೂಕು ಆಡಳಿತ, ಸ್ಥಳೀಯ ಅಗ್ನಿಶಾಮಕ ದಳದ ಸಹಯೋಗದಲ್ಲಿ ಬೋಟ್ ಮೂಲಕ ನಡುಗಡ್ಡೆಯ ಜನರನ್ನ ಕರೆತರಲು ಪ್ರಯತ್ನ ನಡೆಸುತ್ತಿದ್ದಾರೆ.
ಡಿವೈಎಸ್ಪಿ ಎಸ್.ಎಸ್. ಹುಲ್ಲೂರು, ಸಿಪಿಐ ಯಶವಂತ ಬಿಸನಳ್ಳಿ, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ರವೀಂದ್ರ ಘಾಟ್ಗೆ ಬೋಟ್ ಮೂಲಕ ನಡುಗಡ್ಡೆಗೆ ತೆರಳಿದ್ದು, ಮನವೊಲಿಸುವ ಯತ್ನ ಮಾಡುತ್ತಿದ್ದಾರೆ.
ಪ್ರತಿ ವರ್ಷ ಕರೆದೊಯ್ದು ದಡಕ್ಕೆ ಬಿಡುವ ಅಧಿಕಾರಿ ವರ್ಗ ನಂತರ ಅಗತ್ಯ ಸಹಕಾರ ನೀಡುತ್ತಿಲ್ಲ. ಅಲ್ಲಿಗೆ ಬಂದು ಮಾಡುವುದಾದರೂ ಏನು. ಯಾವುದೇ ಕಾರಣಕ್ಕೂ ನಾವು ಬರುವುದಿಲ್ಲ ಎಂದು ಸಂತ್ರಸ್ತ ಕುಟುಂಬಗಳು ಪಟ್ಟು ಹಿಡಿದಿವೆ.