ರಾಮನಗರ: ಹೊಸದೊಡ್ಡಿ ಗ್ರಾಮದಲ್ಲಿ ಮನೆಗಳಿಗೆ ನುಗ್ಗಿದ ದರೋಡೆಕೋರರು ಓರ್ವ ವ್ಯಕ್ತಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ, ಮೂವತ್ತು ಸಾವಿರ ರೂ ಹಣ ಕಿತ್ತು ಪರಾರಿಯಾಗಿರುವ ಘಟನೆ ನಡೆದಿದೆ.
ತಾಲೂಕಿನ ಕೈಲಾಂಚ ಹೋಬಳಿಯ ಹೊಸದೊಡ್ಡಿ ಗ್ರಾಮದಲ್ಲಿ ನಿನ್ನೆ ರಾತ್ರಿ ಮನೆಗಳಿಗೆ ನುಗ್ಗಿದ ದರೋಡೆಕೋರರು ಕೆಂಪಾಜಮ್ಮ ಎಂಬ ವೃದ್ಧೆಯ ಮಾಂಗಲ್ಯ ಸರ ಕಳ್ಳತನ ಮಾಡಲು ಯತ್ನಿಸಿದ್ದಾರೆ.ಬಳಿಕ ಅದೇ ಗ್ರಾಮದ ಮತ್ತೊಂದು ಕೇರಿಯಲ್ಲಿಯ ಮೋಟಪ್ಪ ಹಾಗೂ ಸಿದ್ದಪ್ಪಾಜಿ ಎಂಬುವರ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ್ದಾರೆ.