ರಾಮನಗರ:ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಶಾಲೆಯ ಬಸ್ಸೊಂದು ರಸ್ತೆ ಬದಿ ಉರುಳಿ ಬಿದ್ದಿದ್ದು ಅದೃಷ್ಟವಶಾತ್ ಬಸ್ನಲ್ಲಿದ್ದ 25ಕ್ಕೂ ಹೆಚ್ಚು ಶಾಲಾ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಾಗಡಿ ತಾಲೂಕಿನಲ್ಲಿ ಈ ದುರ್ಘಟನೆ ಸಂಭವಿಸಿದೆ.
ಮಾಗಡಿ ತಾಲೂಕಿನ ಕುದೂರು ಹೋಬಳಿಯ ಹುಲಿಕಲ್ ಗ್ರಾಮದ ಮಾನಸ ಗಂಗೋತ್ರಿ ವಿದ್ಯಾಸಂಸ್ಥೆಗೆ ಸೇರಿದ ಬಸ್ ಇದಾಗಿದ್ದು, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹಳ್ಳಕ್ಕೆ ಉರುಳಿ ಬಿದ್ದಿದೆ. ಅಪಘಾತದಲ್ಲಿ ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.